ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಕೊಡವೂರು ನೇಮಕ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸಕ್ರೀಯ ಸೇವಾದಳದ ಕಾರ್ಯಕರ್ತರಾಗಿರುವ ಅಶೋಕ್ ಕುಮಾರ್ ಕೊಡವೂರು ಅವರನ್ನು ನೇಮಕಗೊಳಿಸಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.
INC COMMUNIQUE
Appointment of DCC Presidents in Karnataka. pic.twitter.com/A3ZjNzh8Ns
— INC Sandesh (@INCSandesh) February 13, 2019
ಈ ಕುರಿತು ಪಕ್ಷದ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರು ಆದೇಶ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆಗೊಳಿಸಿದ್ದಾರೆ.
ಇದೇ ವೇಳೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕೆ ಮಂಜುನಾಥ ಅವರನ್ನು ನೇಮಕಗೊಳಿಸಲಾಗಿದೆ.