ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ
ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ಕಾಂಗ್ರೆಸ್ ಭವನ ಬ್ರಹ್ಮಗಿರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 129ನೇ ಜಯಂತಿಯನ್ನು ಕೋವಿಡ್ 19 ಉಡುಪಿ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಶ್ರೀ ಯು.ಆರ್ ಸಭಾಪತಿಯವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್ ರವರು, ಅಂಬೇಡ್ಕರ್ ರವರು ದೇಶಕ್ಕೆ ನೀಡಿದ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸಮಪಾಲು ಧ್ಯೇಯ ಹಾಗೂ ಉದ್ದೇಶಗಳನ್ನು ಉಳಿಸಿ ಬೆಳೆಸುವುದು ನಮ್ಮ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಎಂದು ಅಭಿಪ್ರಾಯ ಪಟ್ಟರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಕೆಪಿಸಿಸಿಯ ವಿಜ್ಞಾಪನೆಯಂತೆ ಸಂವಿಧಾನದ ಪೀಠಿಕೆ ಓದಿಸಿದರು, ನೆರೆದವರು ಅದನ್ನು ಪುನಃರುಚ್ಚಿಸಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಬಿ. ನರಸಿಂಹ ಮೂರ್ತಿ, ಕೀರ್ತಿ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್, ಮಹಾಬಲ ಕುಂದರ್, ಹಬೀಬ್ ಆಲಿ, ಉಪೇಂದ್ರ ಮೆಂಡನ್, ಯತೀಶ್ ಕರ್ಕೇರ, ಹರೀಶ್ ಶೆಟ್ಟಿ ಪಾಂಗಳ, ಶ್ರೀನಿವಾಸ ಹೆಬ್ಬಾರ್, ಬಾಲಕೃಷ್ಣ, ಸುಂದರ ಕೋಟ್ಯಾನ್ ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಸ್ವಾಗತಿಸಿದರು, ಉಡುಪಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಕೆ. ಜನಾರ್ದನ ಭಂಡಾರ್ಕಾರ್ ವಂದಿಸಿದರು.