ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ
ಉಡುಪಿ: ಚೀನಾ-ಭಾರತ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು.
ನಗರದ ಹುತಾತ್ಮ ಸ್ಮಾರಕದ ಬಳಿ ಜಮಾಯಿಸಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹುತಾತ್ಮ ಯೋಧರಿಗೆ ಪುಷ್ಪ ನಮನದೊಂದಿಗೆ ಮೌನ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಮತ್ತು ಕೆಪಿಸಿಸಿ ಕಾರ್ಯದರ್ಶಿ ಎಮ್ ಎ ಗಫೂರ್ ಅವರು ಸೈನಿಕರ ಬಲಿದಾನ ವ್ಯರ್ಥವಾಗಬಾರದು ಇದಕ್ಕೆ ಪ್ರತಿಯಾಗಿ ದೇಶದ ಪ್ರಧಾನಿ ಸೂಕ್ತ ಪ್ರತ್ಯುತ್ತರ ನೀಡಬೇಕು. ಈ ಮೂಲಕ ಶತ್ರು ರಾಷ್ಟ್ರಗಳು ವಿರುದ್ದ ಕಠಿಣ ಕ್ರಮ ಕೈಗೊಂಡು ದೇಶದ ಸೈನಿಕರಿಗೆ ಆತ್ಮಸ್ಥರ್ಯ ಮೂಡಿಸಬೇಕು. ದೇಶದ ಭದ್ರತೆ ಮತ್ತು ಸುರಕ್ಷತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಸದಾ ಪ್ರಧಾನಿಯವರ ಬೆಂಬಲಕ್ಕೆ ಇರಲಿದೆ ಎಂದರು.
ಈ ವೇಳೆ ಕಾಂಗ್ರೆಸ್ ನಾಯಕರಾದ ನರಸಿಂಹ ಮೂರ್ತಿ, ಹರೀಶ್ ಕಿಣಿ, ರಮೇಶ್ ಕಾಂಚನ್, ದಿನೇಶ್ ಪುತ್ರನ್, ನಾಗೇಶ್ ಉದ್ಯವಾರ, ಪ್ರಶಾಂತ್ ಪೂಜಾರಿ, ಗಣೇಶ್ ನೇರ್ಗಿ, ಶಶಿಧರ್ ಶೆಟ್ಟಿ, ನಾರಾಯಣ ಕುಂದರ್, ಜನಾರ್ಧನ ಭಂಡಾರ್ಕರ್, ಭಾಸ್ಕರ್ ರಾವ್ ಕಿದಿಯೂರು ಹಾಗೂ ಇತರರು ಉಪಸ್ಥಿತರಿದ್ದರು.