ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಕಾಂಗ್ರೆಸ್ ಉಸ್ತುವಾರಿಯಾಗಿ ಪ್ರಖ್ಯಾತ್ ಶೆಟ್ಟಿ ಮತ್ತು ಜಯಶ್ರೀ ಕೃಷ್ಣರಾಜ್ ನೇಮಕ

Spread the love

ಉಡುಪಿ ಜಿಲ್ಲಾ ಕಾಂಗ್ರೆಸ್  ಹಿಂದುಳಿದ ವರ್ಗಗಳ ಘಟಕದ ಉಸ್ತುವಾರಿಯಾಗಿ ಪ್ರಖ್ಯಾತ್ ಶೆಟ್ಟಿ ಮತ್ತು ಜಯಶ್ರೀ ಕೃಷ್ಣರಾಜ್ ನೇಮಕ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸಿನ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ತೆಂಕನಿಡಿಯೂರು ಹಾಗೂ ಕೆಪಿಸಿಸಿ ಮಾಜಿ ಸದಸ್ಯೆ ಜಯಶ್ರೀ ಕ್ರಷ್ಣರಾಜ್ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಸ್ತುವಾರಿಯಾಗಿ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಗೋಪಾಲ ಪೂಜಾರಿಯವರು ನೇಮಿಸಿದ್ದಾರೆ.

ಉಡುಪಿ ಜಿಲ್ಲೆಯಯಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕಗಳನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಉಸ್ತುವಾರಿಯಾಗಿ ರಾಜ್ಯಸಭಾ ಸದಸ್ಯ ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಓಸ್ಕರ್ ಫೆರ್ನಾಂಡಿಸ್‍, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಶಿಫಾರಸ್ಸಿನಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಗೋಪಾಲ ಪೂಜಾರಿಯವರು ನೇಮಿಸಿದ್ದಾರೆ.

ಇತ್ತೀಚಿಗೆ ರಾಜ್ಯಸಭಾ ಸದಸ್ಯ ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಓಸ್ಕರ್ ಫೆರ್ನಾಂಡಿಸ್‍ರವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷದ ವಿವಿಧ ಘಟಕಗಳ ಸಭೆಯಲ್ಲಿ ಈ ನೇಮಕಾತಿ ನಡೆದಿದೆ.

ಉಡುಪಿ ಜಿಲ್ಲಾ ಕಾಂಗ್ರೆಸಿನ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಅವರು ತೆಂಕನಿಡಿಯೂರು ಗ್ರಾಮಪಂಚಾಯತಿನ ಮಾಜಿ ಉಪಾಧ್ಯಕ್ಷರಾಗಿದ್ದು, ಉಡುಪಿ ಜಿಲ್ಲಾ ಬಂಟರ ಸಂಘದ ಉಪಾಧ್ಯಕ್ಷರಾಗಿ, ಸುಮುಖ ಕಲಾವಿದರು ನಾಟಕ ತಂಡದ ಉಸ್ತುವಾರಿಯಾಗಿ, ವೀರ ಮಾರುತಿ ವ್ಯಾಯಾಮ ಶಾಲೆ ಸೇರಿದಂತೆ ವಿವಿಧ ಧಾರ್ಮಿಕ, ಸಹಕಾರಿ, ಸಾಮಾಜಿಕ ಹಾಗೂ ಶೈಕ್ಷಣಿಕ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕೆಪಿಸಿಸಿ ಮಾಜಿ ಸದಸ್ಯೆ ಜಯಶ್ರೀ ಕ್ರಷ್ಣರಾಜ್ ಅವರೂ ಕೂಡ ಲಯನ್ಸ್, ಮಹಿಳಾ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದು ಉಡುಪಿ ನಗರಸಭೆಯಲ್ಲಿ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.


Spread the love