ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಪ್ರದಾನ
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಸಹಯೋಗದೊಂದಿಗೆ ತುಮಕೂರಿನಲ್ಲಿ ರವಿವಾರ ನಡೆದ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಡುಪಿ ಜಿಲ್ಲಾ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.