ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ
ಉಡುಪಿ : ಉಡುಪಿ ಜಿಲ್ಲಾ ಪೊಲೀಸರ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಗುರುವಾರ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ದೊರಕಿತು.
ಉಡುಪಿ ಜಿಲ್ಲಾ ಪೊಲೀಸರ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟವನ್ನು ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಅವರು ಅವರು ಬಲೂನ್ ಹಾರಿ ಬಿಡುವುದರೊಂದಿಗೆ ಹಾಗೂ ಪಾರಿವಾಳ ಹಾರಿಬಿಡುವುದರ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಪೊಲೀಸರ ಕಾರ್ಯ ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ. ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬಂದಿಗೆ ಮಾನಸಿಕ ಆರೋಗ್ಯ ಮುಖ್ಯವಾಗಿದೆ. ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಎಎಸ್ಪಿ ಕುಮಾರಚಂದ್ರ ಉಪಸ್ಥಿತರಿದ್ದರು.
ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಡಿ.21ರಂದು ಸಂಜೆ 4 ಗಂಟೆಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಜೆ. ಅರುಣ್ ಚಕ್ರವರ್ತಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ