ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನ

Spread the love

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಇಂದು ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ಜರಗಿತು.

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅಧ್ಯಕ್ಷತೆ ವಹಿಸಿದ್ದರು.

ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ಗೆ ಉಸ್ತುವಾರಿ ಚಂದ್ರಕಲಾ ರಾವ್ ಮಾತನಾಡಿ, ರಾಜ್ಯ ಸರಕಾರವು ಮಹಿಳೆಯರಿಗಾಗಿ ಅನೇಕ ಸವಲತ್ತು ಗಳನ್ನು ನೀಡಿರುವುದರಿಂದ ನಾವು ಹೆಚ್ಚು ಹೆಚ್ಚು ಮಹಿಳೆ ಯರನ್ನು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸದಸ್ಯರನ್ನಾಗಿ ಸೇರಿಸಿಕೊಳ್ಳ ಬೇಕು. ಈ ಸದಸ್ಯತ್ವ ಅಭಿಯಾನ ಜಿಲ್ಲೆಯ ಪ್ರತೀಯೊಂದು ಬ್ಲಾಕ್ಗಳಲ್ಲಿಯೂ ಚುರುಕುಗೊಳ್ಳ ಬೇಕು ಎಂದು ಹೇಳಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಯುವ ನಾಯಕ ಪ್ರಸಾದ್ರಾಜ್ ಕಾಂಚನ್ ಮಾತನಾಡಿದರು.

ಸದಸ್ಯತ್ವ ಅಭಿಯಾನದಲ್ಲಿ ತೋರಿಸಿದ ಅತ್ಯುತ್ತಮ ನಿರ್ವಹಣೆಗೆ ಕಾಪು ಬ್ಲಾಕ್ ಅಧ್ಯಕ್ಷ ಶಾಂತಲತಾ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಅತೀ ಹೆಚ್ಚು ಸದಸ್ಯರನ್ನು ನೋಂದಾಯಿಸಿ ಅಗ್ರ ಸ್ಥಾನವನ್ನು ಪಡೆಯುವ ಬ್ಲಾಕ್ಗಳಿಗೆ ಬಹುಮಾನವನ್ನೂ ಘೋಷಿಸಲಾಯಿತು

ಕಾರ್ಕಳ ಬ್ಲಾಕ್ ಅಧ್ಯಕ್ಷ ಅನಿತಾ ಡಿಸೋಜ, ಉಡುಪಿ ಬ್ಲಾಕ್ ಅಧ್ಯಕ್ಷ ಮಮತಾ ಶೆಟ್ಟಿ, ಬೈಂದೂರು ಬ್ಲಾಕ್ನ ನಿಯೋಜಿತ ಅಧ್ಯಕ್ಷ ಸೂರ್ಯಕಾಂತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ಜ್ಯೋತಿ ಹೆಬ್ಬಾರ್ ಮೀನಾಕ್ಷಿ ಮಾಧವ ಬನ್ನಂಜೆ, ಚಂದ್ರಿಕಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments