ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಅಮೃತ್ ಶೆಣೈ ಮತ್ತು ಹಬೀಬ್ ಅಲಿ ನೇಮಕ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರೂ ಮತ್ತು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿರುವ ಅಮೃತ್ ಶೆಣೈ ಮತ್ತು ಮಾಜಿ ಎನ್.ಎಸ್.ಯು.ಐ. ಅಧ್ಯಕ್ಷರಾದ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಹಬೀಬ್ ಆಲಿಯವರನ್ನು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಗೋಪಾಲ ಪೂಜಾರಿಯವರು ನೇಮಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಯುವಕ ಕಾಂಗ್ರೆಸ್ ಸಂಘಟನೆಯು ಪಕ್ಷದ ಆಂತರಿಕ ಚುನಾವಣೆ ನಡೆದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವಾಸ್ ಅಮೀನ್ ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆಯಾಗಿದ್ದು ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರು ಚುನಾಯಿತರಾಗಿರುತ್ತಾರೆ.
ಇವರೊಂದಿಗೆ ಅಮೃತ್ ಶೆಣೈ ಮತ್ತು ಹಬೀಬ್ ಆಲಿಯವರನ್ನು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಗೋಪಾಲ ಪೂಜಾರಿಯವರು ನೇಮಿಸಿದ್ದಾರೆ. ಇತ್ತೀಚಿಗೆ ರಾಜ್ಯಸಭಾ ಸದಸ್ಯ ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಓಸ್ಕರ್ ಫೆರ್ನಾಂಡಿಸ್ರವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷದ ವಿವಿಧ ಘಟಕಗಳ ಸಭೆಯಲ್ಲಿ ಈ ನೇಮಕಾತಿ ನಡೆದಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.