Home Mangalorean News Kannada News ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ನಿಂದ ಬಡ ಮಹಿಳೆಯರಿಗೆ ಸೀರೆ ವಿತರಿಸಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ನಿಂದ ಬಡ ಮಹಿಳೆಯರಿಗೆ ಸೀರೆ ವಿತರಿಸಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Spread the love

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ನಿಂದ ಬಡ ಮಹಿಳೆಯರಿಗೆ ಸೀರೆ ವಿತರಿಸಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಉಡುಪಿ: ದೇಶದ ಮಾಜಿ ಪ್ರಧಾನಿ 101 ನೇ ಜನ್ಮದಿನಾಚರಣೆಯನ್ನು ಉಡು ಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದ್ರಾಳಿ ಪರಿಶಿಷ್ಠ ಜಾತಿ ಕಾಲನಿಯ ಮಹಿಳೆಯರಿಗೆ ಸೀರೆಗಳನ್ನು ವಿತರಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 20 ಅಂಶದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಬಡವರು, ಶೋಷಿತರು ಹಾಗೂ ಧಮನಿತರ ಕೈ ಬಲಪಡಿಸಿದರು. ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತರುವ ಮೂಲಕ ಭೂಮಿ ಇಲ್ಲದವರಿಗೆ ಭೂಮಿ ಕೊಡಿಸಿದರು. ಮಹಿಳೆಯರ ಸಬಲೀಕರಣಕ್ಕಾಗಿ ವಿಧವಾ ಮಹಿಳೆಯರಿಗೆ ಮಾಶಾಸನ ಸೇರಿದಂತೆ ಜನ ಸಾಮಾನ್ಯರ ಕಲ್ಯಾಣ ಕಾರ್ಯಕ್ರಮಗಳನ್ನು ಅವರ ಆಡಳಿತ ಕಾಲದಲ್ಲಿ ಜಾರಿಗೆ ತಂದರು. ಅವರ ಕಲ್ಯಾಣ ಕಾರ್ಯಕ್ರಮಗಳು ಇಂದಿಗೂ ಅನುಷ್ಠಾನದಲ್ಲಿವೆ. ಜಾತ್ಯಾತೀತ ನಿಲುವು ಅವರಾದ್ದಾಗಿತ್ತು. ಉಕ್ಕಿನ ಮಹಿಳೆ ಎಂದು ಗುರುತಿಸಿಕೊಂಡರು ಎಂದು ಸ್ಮರಿಸಿದರು.

ಈ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ಇದರ ಪ್ರಧಾನ ಕಾರ್ಯದರ್ಶಿ ವಿಘ್ನೇಶ್ ಕಿಣಿ, ಇಮ್ರಾನ್, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ಮಾಜಿ ನಗರಸಭಾ ಸದಸ್ಯ ವಿಜಯ್ ಮಂಚಿ, ಯುವ ಕಾಂಗ್ರೆಸ್ ನಾಯಕರಾದ ಪ್ರವೀಣ್ ಬಾರಕೂರು, ನೀರಜ್ ಪಾಟೀಲ್ ಹಾಗೂ ಇತರರು ಉಪಸ್ಥಿತರಿದ್ದರು.


Spread the love

Exit mobile version