ಉಡುಪಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ – ಒಂದೇ ದಿನ 150 ಪಾಸಿಟಿವ್ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು ಮಂಗಳವಾರ ಒಂದೇ ದಿನ 150 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 150 ಮಂದಿಗೆ ಸೋಂಕು ದೃಢವಾಗಿರುವುದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 410 ಕ್ಕೆ ಏರಿಕೆಯಾಗಿರುವುದು ಆತಂಕ ಸೃಷ್ಟಿಸಿದೆ.
ಬೆಳಿಗ್ಗೆ ರಾಜ್ಯ ಕಂದಾಯ ಸಚಿವ ಅಶೋಕ್ ಅವರು 210 ಪ್ರಕರಣಗಳು ಇರುವುದಾಗಿ ಹೇಳಿದ್ದು ಈ ವರೆಗೆ ರಾಜ್ಯ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿಲ್ಲದ ಕಾರಣ ಜಿಲ್ಲಾಡಳತ ತನ್ನ ಬುಲೆಟಿನ್ ಬಿಡುಗಡೆ ಮಾಡಿದೆ