Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಗುರುವಾರ ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳಿಲ್ಲ

ಉಡುಪಿ ಜಿಲ್ಲೆಯಲ್ಲಿ ಗುರುವಾರ ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳಿಲ್ಲ

Spread the love

ಉಡುಪಿ ಜಿಲ್ಲೆಯಲ್ಲಿ ಗುರುವಾರ ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳಿಲ್ಲ

ಉಡುಪಿ: ಉಡುಪಿ ಜಿಲ್ಲೆಗೆ ಗುರುವಾರ ನಿರಾಳವಾಗಿದ್ದು ಜಿಲ್ಲೆಯಲ್ಲಿ ಯಾವುದೇ ಕೊರೋನಾ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.

ಉಡುಪಿ ಜಿಲ್ಲೆಯಲ್ಲಿ ಬುಧವಾರ 4 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೊಂಕಿತರ ಸಂಖ್ಯೆ 1039 ಕ್ಕೆ ಏರಿಕೆಯಾಗಿತ್ತು. ಆದರೆ, ಗುರುವಾರ ಸೋಂಕು ನಿಯಂತ್ರಣಕ್ಕೆ ಬಂದಿದೆ. ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ.

ಈ ನಡುವೆ ಉಡುಪಿಯನ್ನು ಅತಿ ಹೆಚ್ಚು ಸೋಂಕಿತರು ಇರುವ ಜಿಲ್ಲೆ ಎಂದು ಹೇಳಲಾಗುತ್ತಿತ್ತು ಆದರೆ ಈಗ ಗುಣಮುಖರಾಗುವುದರಲ್ಲೂ ಉಡುಪಿ ನಂಬರ್ ಒನ್ ಸ್ಥಾನದಲ್ಲಿದೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 946 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಜಿಲ್ಲೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿರುವವರು 130 ಮಂದಿ ಮಾತ್ರ. ಇವರೆಲ್ಲ ನಾಲ್ಕೈದು ದಿನಗಳಲ್ಲಿ ಗುಣ ಮುಖರಾಗಿ ಬಿಡುಗಡೆಯಾಗಲಿದ್ದಾರೆ. ಉಡುಪಿಯಲ್ಲಿ ಸಾಕಷ್ಟು ಮಂದಿ ಮಾಸ್ಕ್ ಹಾಕದೆ ಹೊರಗಡೆ ಓಡಾಟ ನಡೆಸುತ್ತಿದ್ದಾರೆ. ಮಾಸ್ಕ್ ಹಾಕದವರಿಂದ ಈತನಕ ಸುಮಾರು 27000ರೂ.ವರೆಗೆ ದಂಡ ವಸೂಲಿ ಮಾಡಲಾಗಿದೆ ಮುಂದಿನ ದಿನಗಳಲ್ಲಿ ಸರಿಯಾಗಿ ಮಾಸ್ಕ್ ಹಾಕದವರಿಗೂ ದಂಡ ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ತಿಳಿಸಿದ್ದಾರೆ.


Spread the love

Exit mobile version