ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಹಿನ್ನಲೆ : ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ ಬಳಕೆ – ಉಸ್ತುವಾರಿ ಸಚಿವ ಬೊಮ್ಮಾಯಿ

Spread the love

ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಹಿನ್ನಲೆ : ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ ಬಳಕೆ – ಉಸ್ತುವಾರಿ ಸಚಿವ ಬೊಮ್ಮಾಯಿ

ಉಡುಪಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು ಎಲ್ಲಾ ರೀತಿಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ರಾಜ್ಯದ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು ಪರಿಸ್ಥಿತಿ ನಿಭಾಯಿಸಲು ರಾಜ್ಯದ NDRF ತಂಡ ಉಡುಪಿಗೆ ರವಾನೆ ಮಾಡಲಾಗಿದೆ. ಸುಮಾರು 250 ಸದಸ್ಯರ NDRF ತಂಡವನ್ನು ತಡರಾತ್ರಿಯೇ ಉಡುಪಿಗೆ ಕಳಿಸಿದ್ದೇವೆ ಮತ್ತು ಈತನಕ 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಅಲ್ಲದೆ ರಕ್ಷಣಾ ಕಾರ್ಯಗಳ ಬಗ್ಗೆ ಕಂದಾಯ ಸಚಿವರ ಜೊತೆಗೆ ಕೂಡ ಸಮಾಲೋಚನೆ ನಡೆಸಿದ್ದು, ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನ್ನು ರಕ್ಷಣಾ ಕಾರ್ಯಕ್ಕೆ ನೀಡಲು ಕೇಳಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.


Spread the love