ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಂದು ವರ್ಷದ ಮಗು ಸೇರಿ 22 ಮಂದಿಗೆ ಕೋರೋನಾ ಪಾಸಿಟಿವ್
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಂದು ವರ್ಷದ ಮಗು ಸೇರಿ ಒಟ್ಟು 22 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1228 ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಮಹಾರಾಷ್ಟ್ರದಿಂದ ಬಂದ 5, ತೆಲಂಗಾಣದಿಂದ ಬಂದ ಒಬ್ಬರು, ಬೆಂಗಳೂರಿನಿಂದ ಬಂದ ಒಬ್ಬರು ಹಾಗೂ ಅಬುದಾಬಿಯಿಂದ ವಾಪಾಸಾದ ಒಂದು ವರ್ಷದ ಮಗುವಿಗೆ ಪಾಸಿಟಿವ್ ದೃಢಗೊಂಡಿದೆ ಅಲ್ಲದೆ ಪ್ರಾಥಮಿಕ ಸಂಪರ್ಕದಿಂದಾಗಿ 14 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ
ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ