ಉಡುಪಿ ಜಿಲ್ಲೆಯಲ್ಲಿ ಬುಧವಾರ 31 ಮಂದಿಗೆ ಕೊರೋನಾ ಪಾಸಿಟಿವ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 31 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1421 ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಮಹಾರಾಷ್ಟ್ರದಿಂದ ಬಂದ 7 ಮಂದಿ, ಅಬುದಾಬಿಯಿಂದ ಬಂದ ಒರ್ವರು, ಮಸ್ಕತ್ ನಿಂದ ಬಂದ 2 ಮಂದಿ ಹಾಗೂ ಹೊರಜಿಲ್ಲೆಯಿಂದ ಬಂದ 9 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಅಲ್ಲದೆ ಪ್ರಾಥಮಿಕ ಸಂಪರ್ಕದಿಂದ ಉಡುಪಿಯ 12 ಜನಕ್ಕೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.
ಒಟ್ಟು 31 ಮಂದಿ ಸೋಂಕಿತರಲ್ಲಿ 20 ಮಂದಿ ಉಡುಪಿ, 7 ಮಂದಿ ಕುಂದಾಪುರ ಮತ್ತು 4 ಮಂದಿ ಕಾರ್ಕಳ ತಾಲೂಕಿಗೆ ಸೇರಿದವರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ
ಈ ವರೆಗೆ ಒಟ್ಟು 1189 ಮಂದಿ ಕೋರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ಸದ್ಯ ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 229 ಸಕ್ರಿಯ ಪ್ರಕರಣಗಳಿವೆ ಎಂದು ಅವರು ತಿಳಿಸಿದ್ದಾರೆ
ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.