Spread the love
ಉಡುಪಿ ಜಿಲ್ಲೆಯ ಮೂರನೇ ಕೋವಿಡ್ ರೋಗಿ ಆಸ್ಪತ್ರೆಯಿಂದ ಬಿಡುಗಡೆ
ಉಡುಪಿ: ಕೋವಿಡ್–19 ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲೆಯ ಮೂರನೇ ರೋಗಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಮಾರ್ಚ್ 24ರಂದು ಕೇರಳದಿಂದ ಬಂದ 29 ವರ್ಷದ ಮೂರನೇ ಕೋವಿಡ್ ಸೋಂಕಿತ ರೋಗಿಯ ಎರಡು ವರದಿಗಳು ಕೂಡ ನೆಗೆಟಿವ್ ಬಂದ ಹಿನ್ನಲೆಯಲ್ಲಿ ಶನಿವಾರ ಮಧ್ಯಾಹ್ನ ಜಿಲ್ಲೆಯ ಟಿ ಎಮ್ ಎ ಪೈ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಅವರನ್ನು ಮುಂದಿನ 14 ದಿನಗಳ ತನಕ ಹೋಮ್ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ|ಸುಧೀರ್ ಚಂದ್ರ ಸೂಡ ಹೇಳಿದ್ದಾರೆ.
ಮೂರನೇ ರೋಗಿಯ ಬಿಡುಗಡೆಯೊಂದಿಗೆ ಉಡುಪಿ ಜಿಲ್ಲೆಯ ಎಲ್ಲಾ ಪಾಸಿಟಿವ್ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಗೊಂಡಂತಾಗಿದೆ.
Spread the love