Home Mangalorean News Kannada News ಉಡುಪಿ ಜಿಲ್ಲೆಯ ವಿವಿಧೆಡೆ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ ಜಿಲ್ಲೆಯ ವಿವಿಧೆಡೆ ಸ್ವಾತಂತ್ರ್ಯೋತ್ಸವ ಆಚರಣೆ

Spread the love

ಉಡುಪಿ ಜಿಲ್ಲೆಯ ವಿವಿಧೆಡೆ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ: ಜಿಲ್ಲೆಯ ವಿವಿಧೆಡೆ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಇದರ ವಿವರಗಳು ಇಲ್ಲಿವೆ ನೋಡಿ

ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯ
ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವತಿಯಿಂದ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ಮತ್ತು ಐಸಿವೈಎಂ ಉದ್ಯಾವರ ಘಟಕದ ನೇತೃತ್ವದಲ್ಲಿ ಸಂತ ಫ್ರಾನ್ಸಿಸ್ ಕ್ಸೇವಿಯರ್ ಪ್ರೌಢಶಾಲಾ ವಟಾರದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವಂ. ಫಾ. ಅನಿಲ್ ಡಿಸೋಜಾ ಧ್ವಜಾರೋಹಣ ನೆರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಹಾಯಕ ಧರ್ಮ ಗುರು ವo. ಸ್ಟೇಫನ್ ರೊಡ್ರಿಗಸ್, ಪಾಲನ ಮಂಡಳಿಯ ಉಪಾಧ್ಯಕ್ಷ ಲಾರೆನ್ಸ್ ಡೇಸ, ಕಾರ್ಯದರ್ಶಿ ಜಾನ್ ಡಿಸೋಜಾ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ಲ. ರೋನಲ್ಡ್ ರೆಬೆಲ್ಲೊ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಐಸಿವೈಎಂ ಅಧ್ಯಕ್ಷ ಗ್ಲ್ಯಾನಿಶ್ ಪಿಂಟೋ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರೆ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಕಾರ್ಯದರ್ಶಿ ಲ. ಜೆರಾಲ್ಡ್ ಪಿರೇರ ಧನ್ಯವಾದ ಸಮರ್ಪಿಸಿದರು. ಐಸಿವೈಎಂ ಸದಸ್ಯರು ರಾಷ್ಟ್ರಭಕ್ತಿ ಗೀತೆಗಳನ್ನು ಹಾಡಿದರು.

ಸೀತಾ ನದಿಯ ಮದ್ಯದಲ್ಲಿ ಕಯಾಕಿಂಗ್ ಮೂಲಕ ತೆರಳಿ ಧ್ವಜಾರೋಹಣ
78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಶುಭ ಗಳಿಗೆಯಲ್ಲಿ ರಾಷ್ಟ್ರ ಪ್ರೇಮವನ್ನು ಬಿತ್ತುವ ಸಲುವಾಗಿ ಪ್ರತಿ ವರ್ಷ ದಂತೆ ಈ ಬಾರಿಯೂ ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಂಡು ಸರ್ಕಾರ ಪ್ರತೀ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಪಣ ತೊಟ್ಟು ದುಡಿದರೆ ಸಾಲಿಗ್ರಾಮ ಕಯಾಕಿಂಗ್ ತಂಡ ವಿಭಿನ್ನವಾಗಿ ರಾಷ್ಟ್ರ ಪ್ರೇಮವನ್ನು ಮೆರೆಯುವ ಪ್ರಯತ್ನ ಮಾಡಿದೆ. ಸೀತಾ ನದಿಯಲ್ಲಿ ಕಯಕಿಂಗ್ ಮೂಲಕ ಪ್ರಕೃತಿ ವಿಸ್ಮಯಗಳನ್ನು ತೋರಿಸಿ ಜನರಲ್ಲಿ ಪ್ರಕೃತಿ ಪ್ರೇಮವನ್ನು ಬಿತ್ತುವ ಕೆಲಸ ಮಾಡುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ ಈ ಬಾರಿಯೂ ವಿಭಿನ್ನ ಪ್ರಯತ್ನ ನಡೆಸಿದೆ.

ಕಳೆದ ಬಾರಿ ಸೀತಾ ನದಿಯ ಮದ್ಯದಲ್ಲಿ ಕಯಾಕಿಂಗ್ ಮೂಲಕ ತೆರಳಿ ಅಲ್ಲಿ ಧ್ವಜ ಸ್ತಂಭ ನೆಟ್ಟು ಧ್ವಜಾರೋಹಣ ನಡೆಸಿದ ತಂಡ ಈ ಬಾರಿ ನದಿಯ ಮದ್ಯದಲ್ಲಿ ಕಾಂಡ್ಲಾ ಮರದ ನಡುವೆ ಕಾಂಡ್ಲಾ ನಡಿಗೆ ಸೇತುವೆ ರಚಿಸಿ ಧ್ವಜಾರೋಹಣ ಮಾಡಿ ಅನ್ನವಿತ್ತ ಪ್ರಕೃತಿಯಲ್ಲಿ ರಾಷ್ಟ್ರಪ್ರೇಮವನ್ನು ಉತ್ತೇಜಿಸುವ ಪ್ರಯತ್ನ ಮಾಡಿದೆ.. ಉದ್ಯಮಿಗಳಾದ ಪ್ರಮೋದ್ ಮದ್ವರಾಜ್ ಇವರು ಧ್ವಜಾರೋಹಣಗೈದು ಮಾತನಾಡಿ ಯುವಕರ ಕಾರ್ಯ ಪ್ರಶಂಸನೀಯ,ಯುವಕರಲ್ಲಿನ ರಾಷ್ಟ್ರ ಪ್ರೇಮ ಯುವ ಜನಾಂಗಕ್ಕೆ ಮಾದರಿ. ಪ್ರತೀ ಬಾರಿಯೂ ನವೀನ ಆಲೋಚನೆಗಳ ಮೂಲಕ ಕಾರ್ಯ ನಿರ್ವಹಿಸಿ ಸಮಾಜಕ್ಕೆ ಮಾದರಿಯಾಗಿದ್ದರೆ ಎಂದರು. ಪ್ರಕೃತಿ ಮಡಿಲಲ್ಲಿ ಭಾರತಾಂಬೆಯನ್ನು ನಿಲ್ಲಿಸಿ ಜನರಿಗೆ ಪ್ರಕ್ರತಿ ಪ್ರೇಮದ ಜೊತೆ ದೇಶ ಪ್ರೇಮವನ್ನು ಬೆಳೆಸಿಕೊಳ್ಳಲು ಸಂದೇಶ ನೀಡಿದರು. ಸಾಲಿಗ್ರಾಮ ಕಯಾಕಿಂಗ್ ನ ಮುಖ್ಯಸ್ಥರಾದ ಮಿಥುನ್ ಕುಮಾರ್ ಮೆಂಡನ್ & ಲೋಕೇಶ್ ಮತ್ತಿತರು ಉಪಸ್ಥಿತರಿದ್ದರು .

ಉಡುಪಿ ಶ್ರೀಕೃಷ್ಣ ಮಠದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಉಡುಪಿಯ ಶ್ರೀಕೃಷ್ಣ ಮಠದ ಗೀತಾಮಂದಿರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ನೆರವೇರಿಸಿದರು.

ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.

ಸುಗುಣ ಶಾಲೆಯ ಮಕ್ಕಳಿಂದ ದೇಶಭಕ್ತಿ ಗಾಯನ ಕಾರ್ಯಕ್ರಮ ನಡೆಯಿತು. ಕೃಷ್ಣ ಮಠದ ಭಕ್ತರು, ಪುತ್ತಿಗೆ ಮಠದ ದಿವಾನರು, ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಉಡುಪಿ ಜಾಮೀಯ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ ಜಾಮಿಯಾ ಮಸೀದಿಯ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಮಸೀದಿ ವಠಾರದಲ್ಲಿ ಆಚರಿಸಲಾಯಿತು.

ಮಸೀದಿಯ ಉಪಾಧ್ಯಕ್ಷ ವಿ.ಎಸ್.ಉಮರ್ ಧ್ವಜಾಹರೋಹಣ ನೆರವೇರಿಸಿದರು. ಮಸೀದಿಯ ಖತೀಬ್ ಮೌಲಾನ ರಶೀದ್ ಅಹಮದ್ ನದ್ವಿ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು.

ಈ ಮಹನೀಯರ ತ್ಯಾಗದಿಂದ ನಮಗೆ ದೊರೆತ ಸ್ವಾತಂತ್ರ್ಯವನ್ನು ಉಳಿಸಿ ಎಲ್ಲರೂ ಸಾಮರಸ್ಯದಿಂದ ಬದುಕಬೇಕಾಗಿದೆ ಎಂದು ಕಿವಿ ಮಾತು ಹೇಳಿದರು.

ಈ ಸಂದರ್ಭದಲ್ಲಿ ಮಸೀದಿಯ ಕಾರ್ಯದರ್ಶಿ ಖಾಲಿದ್ ಅಬ್ದುಲ್ ಅಝೀಝ್, ಖಜಾಂಜಿ ಶಾಹಿದ್ ಅಲಿ ಸಮಿತಿ, ಸದಸ್ಯರಾದ ಇಫ್ತಿಕಾರ್, ಜಮಾತ್ ಸದಸ್ಯರು, ಮುಸಲ್ಲಿ ಬಾಂಧವರು, ಮದ್ರಸದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಮಸೀದಿಯ ಮೊಹಸಿನ್ ಯೂನಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಪಲಿಮಾರಿನ ಮೂಲ ಮಠದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಪಲಿಮಾರಿನ ಮೂಲ ಮಠದಲ್ಲಿ ಕಿರಿಯ ಯತಿಗಳಾದ ಶ್ರೀ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಧ್ವಜ ಆರೋಹಣವನ್ನು ನೆರವೇರಿಸಿದರು

ಈ ಸಂದರ್ಭದಲ್ಲಿ ಹಿರಿಯ ವಿದ್ವಾಂಸರಾದ ಹರಿದಾಸಭಟ್ಟ ಆದ್ಯಪಾಡಿ ಯೋಗ ದೀಪಿಕಾ ವಿದ್ಯಾಪೀಠದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಧ್ವಜಕ್ಕೆ ಗೌರವವನ್ನು ಸಲ್ಲಿಸಿದರು

ಉಡುಪಿ ಜಿಲ್ಲಾ ಬಿಜೆಪಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನೆರವೇರಿಸಲಾಯಿತು .

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಪ್ರಮುಖರಾದ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾಮತ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸರೋಜಾ ಶೆಣೈ, ನಗರಸಭಾ ಸದಸ್ಯರಾದ ಅಶೋಕ್ ನಾಯ್ಕ್, ಅನಿಟಾ ಬೆಲಿಂಡ ಡಿಸೋಜ, ಪ್ರಮುಖರಾದ ರಾಘವೇಂದ್ರ ಉಪ್ಪೂರು, ದಿನಕರ ಪೂಜಾರಿ, ಸಲೀಂ ಅಂಬಾಗಿಲು, ರತ್ನಾಕರ ದೇವಾಡಿಗ, ಶಿವರಾಮ ಕಾಡಿಮಾರ್, ಚಂದ್ರಶೇಖರ ಪ್ರಭು, ನಿತಿನ್ ಪೈ, ದೀಪಾ ಪೈ, ಶಾಂತಿ ಮನೋಜ್, ಯಶೋದಾ, ಕೈರುನ್ನೀಸಾ ಮತ್ತಿತರರು ಉಪಸ್ಥಿತರಿದ್ದರು.


Spread the love

Exit mobile version