ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ
ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಶನಿವಾರ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪೊಲೀಸ್ ಅಧಿಕಾರಿಗಳು ಅರ್ಥಪೂರ್ಣವಾಗಿ ಆಚರಿಸಿದರು.
ಕುಂದಾಪುರ ನಗರ ಠಾಣೆಯಲ್ಲಿ ಪಿಎಸ್ ಐ ಹರೀಶ್ ಆರ್ ನಾಯ್ಕ್ ಅವರು ಧ್ವಜಾರೋಹಣ ನೇರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. ಸ್ವಾತಂತ್ರ್ಯ ಸೇನಾನಿಗಳ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು, ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಪುಕ್ಕಟೆಯಾಗಿ ದೊರೆತಿಲ್ಲ ಇದರ ಹಿಂದ ಸಾವಿರಾರು ಜನರ ಬಲಿದಾನವಿದೆ. ಕೊರೋನಾ ಸಂಕಷ್ಟ ಸಮಯದಲ್ಲಿ ಎಲ್ಲಾ ಪೊಲೀಸ್ ಅಧಿಕಾರಿಗಳು ತಮ್ಮ ಸೇವೆಯನ್ನು ಪ್ರಜೆಗಳಿಗೆ ನೀಡಿದ್ದು ಅಭಿನಂದನಾರ್ಹ, ಸ್ವಾತಂತ್ರ್ಯೋತ್ಸವ ತೋರಿಕೆಯ ಆಚರಣೆ ಆಗದೆ ದೇಶಾಭಿಮಾನ ಹೃದಯಾಂತರಾಳದಲ್ಲಿ ಮೂಡಲಿ ಎಂದರು.
ಬ್ರಹ್ಮಾವರದ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ರಾಘವೇಂದ್ರ ಅವರು ಪೊಲೀಸ್ ಅಧಿಕಾರಿಗಳೊಂದಿಗೆ ಸೇರಿ ಧ್ವಜಾರೋಹಣ ನೆರವೇರಿಸಿದರು.
ಕುಂದಾಪುರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ರಾಜ್ ಕುಮಾರ್ ಅವರು ತಮ್ಮ ಠಾಣೆಯ ಸಿಬಂದಿಗಳೊಂದಿಗೆ ಸೇರಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮಿಸಿದರು.
ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿ ಅನಿಲ್ ಕುಮಾರ್ ಅವರು ಧ್ವಜಾರೋಹಣ ನಡೆಸಿ ಸಂದೇಶ ನೀಡಿದರು.
ಗಂಗೊಳ್ಳಿ ಠಾಣೆಯಲ್ಲಿ ಠಾಣಾಧಿಕಾರಿ ಭೀಮಾ ಶಂಕರ್ ಹಾಗೂ ಸಿಬಂದಿಗಳು ಜೊತೆಯಾಗಿ ಸೇರಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.