Home Mangalorean News Kannada News ಉಡುಪಿ ಡಾ. ಟಿ.ಎಂ.ಎ. ಪೈ ಆಸ್ಪತ್ರೆ ಕೋವಿಡ್-19 ಆಸ್ಪತ್ರೆಯಾಗಿ ಘೋಷಣೆ

ಉಡುಪಿ ಡಾ. ಟಿ.ಎಂ.ಎ. ಪೈ ಆಸ್ಪತ್ರೆ ಕೋವಿಡ್-19 ಆಸ್ಪತ್ರೆಯಾಗಿ ಘೋಷಣೆ

Spread the love

ಉಡುಪಿ ಡಾ. ಟಿಎಂಎ ಪೈ ಆಸ್ಪತ್ರೆ ಕೋವಿಡ್-19 ಆಸ್ಪತ್ರೆಯಾಗಿ ಘೋಷಣೆ

ಉಡುಪಿ: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದಿಂದ ಕರೋನಾ ವೈರಸ್ (ಕೋವಿಡ್ – 19) ಖಚಿತಗೊಂಡ ರೋಗಿಗಳಿಗೆ ಚಿಕಿತ್ಸೆ ನೀಡಲು ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೀಸಲು ಇಡಲಾಗಿದೆ ಎಂದು ಮಾಹೆ ಸಹ ಕುಲಾಧಿಪತಿ ಡಾ|ಎಚ್ ಎಸ್ ಬಲ್ಲಾಳ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಸೋಮವಾರ ಉಡುಪಿಯಲ್ಲಿ ಘೋಷಣೆ ಮಾಡಿದರು

ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದ ಜಂಟಿ ಸುದ್ದಿಗೋಷ್ಠೀಯಲ್ಲಿ ಮಾತನಾಡಿ ಈಗಾಗಲೇ ಜಿಲ್ಲೆಯಲ್ಲಿ 3 ಕೋರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಆಡಳಿತ ಮಂಡಳಿಯು ಕರೋನಾ ವೈರಸ್ (ಕೋವಿಡ್ – 19) ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಗಟ್ಟಲು ಮತ್ತು ಉಂಟಾಗುವ ಸವಾಲುಗಳನ್ನು ಎದುರಿಸಲು ನಾವು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಉಡುಪಿ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರದ ಸಕ್ರಿಯ ಬೆಂಬಲದೊಂದಿಗೆ, ಕರೋನಾ ವೈರಸ್ (ಕೋವಿಡ್ – 19) ಖಚಿತಗೊಂಡ ರೋಗಿಗಳಿಗೆ ಚಿಕಿತ್ಸೆ ನೀಡಲು ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೀಸಲಿಡಲು ನಾವು ನಿರ್ಧರಿಸಿದ್ದೇವೆ ಎಂದರು.

ಈ ರೀತಿಯಲ್ಲಿ ಒಂದು ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಇಂತಹ ನಿರ್ಧಾರ ತೆಗೆದುಕೋಂಡಿರುವುದು ರಾಜ್ಯದಲ್ಲಿ ಪ್ರಥಮವಾಗಿದ್ದು ಇಲ್ಲಿ ಕರೋನಾ ವೈರಸ್ (ಕೋವಿಡ್ – 19) ಖಚಿತಗೊಂಡ ರೋಗಿಗಳಿಗೆ ಚಿಕಿತ್ಸೆ ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದರು.

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು 100 ಹಾಸಿಗೆಗಳ ಆಸ್ಪತ್ರೆಯಾಗಿದ್ದು,11 ತೀವ್ರ ನಿಘಾ ಘಟಕ (ಐಸಿಯು) ಹಾಸಿಗೆಗಳು, 15 ಎಚ್ಡಿಯು (ಹೈ ಡೆಪೆಂಡೆನ್ಸಿ ಯುನಿಟ್) ಹಾಸಿಗೆಗಳು, 36 ಖಾಸಗಿ ಕೊಠಡಿಗಳಿವೆ ಇವುಗಳನ್ನು ಪ್ರತ್ಯೇಕ ಉದ್ದೇಶಕ್ಕಾಗಿ (ಐಸೋಲೇಷನ್) ಬಳಸಬಹುದು, ಜೊತೆಗೆ 43 ಸಾಮಾನ್ಯ ಹಾಸಿಗೆಗಳ ಸೌಲಭ್ಯವಿದೆ. ಕಸ್ತೂರ್ಬಾ ಆಸ್ಪತ್ರೆ ಮತ್ತು ಡಾ. ಟಿಎಂಎ ಪೈ ಆಸ್ಪತ್ರೆಯ ವೈದ್ಯರ ತಂಡ, ನರ್ಸಿಂಗ್, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಸಹಾಯಕ ಸಿಬ್ಬಂದಿಗಳ ಸಮರ್ಪಿತ ತಂಡವು ದಿನದ 24 ಗಂಟೆಗಳೂ ಕಾರ್ಯ ನಿರ್ವಹಿಸಲಿದೆ.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಪ್ರಸ್ತುತ 3 ಕರೋನಾ ವೈರಸ್ (ಕೋವಿಡ್ – 19) ಖಚಿತಗೊಂಡಿರುವ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ, ಇವುಗಳನ್ನು ಉಡುಪಿಯ ಜಿಲ್ಲಾ ಅಸ್ಸ್ಪತ್ರೆಯಿಂದ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆಗಳಿಂದ ಸ್ವೀಕರಿಸಲಾಗಿದೆ

ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲವು ಉಡುಪಿ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಕರೋನಾ ವೈರಸ್ (ಕೋವಿಡ್ – 19) ವಿರುದ್ಧದ ಸವಾಲುಗಳನ್ನು ಎದುರಿಸಲು ಸದಾ ಸಿದ್ಧವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಉಪಸ್ಥಿತರಿದ್ದರು.


Spread the love

Exit mobile version