ಉಡುಪಿ: ದೇವಾಲಯಗಳಲ್ಲಿ ಸಿಡಿಮದ್ದು ಪ್ರದರ್ಶನಕ್ಕೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ

Spread the love

ಉಡುಪಿ : ಕೇರಳ ಕೊಲ್ಲಂ ಪುಟ್ಟಿಂಗಲ್‌ ದೇವಾಲಯದಲ್ಲಿ ನಡೆದ ಸಿಡಿಮದ್ದು ದುರಂತದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ದೇವಾಲಯಗಳಲ್ಲಿ ಸಿಡಿಮದ್ದು ಪ್ರದರ್ಶನ ಹಾಗೂ ಸಂಗ್ರಹಕ್ಕೆ ಅನುಮತಿಯನ್ನು ಕಡ್ಡಾಯಗೊಳಿಸಲಾಗಿದೆ.
ದೇವಸ್ಥಾನಗಳಲ್ಲಿ ಸಿಡಿಮದ್ದು ಪ್ರದರ್ಶನವನ್ನು ಸಂಪೂರ್ಣ ನಿಷೇಧಿಸಲು ಸಾಧ್ಯವಿಲ್ಲ. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಆದ್ದರಿಂದ ಸುರಕ್ಷಿತ ಸಂಗ್ರಹ ಹಾಗೂ ಪ್ರದರ್ಶನಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಸುತ್ತೋಲೆಯನ್ನು ಕಳುಹಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಆರ್‌.ವಿಶಾಲ್‌ ತಿಳಿಸಿದ್ದಾರೆ.
ದೇವಸ್ಥಾನಗಳಲ್ಲಿ ಸಿಡಿಮದ್ದು ಪ್ರದರ್ಶನ ಮಾಡುವುದಾದರೆ ಮೊದಲು ಪೊಲೀಸ್‌, ತಹಶೀಲ್ದಾರ್‌ ಹಾಗೂ ಅಗ್ನಿಶಾಮಕ ದಳದಿಂದ ನಿರಾಕ್ಷೇಪಣಾ ಪತ್ರವನ್ನು ತರಬೇಕು. ನಂತರ ಅದನ್ನು ಜಿಲ್ಲಾಧಿಕಾರಿಗೆ ಕಳುಹಿಸಿಕೊಡಲಾಗುವುದು. ಅವರು ಸೂಚಿಸಿದರೆ ಅನುಮತಿ ಯನ್ನು ನೀಡಲಾಗುವುದು ಎಂದು ಉಡುಪಿ ಮುಜರಾಯಿ ಇಲಾಖೆಯ ಸಹಾಯಕ ನಿರ್ದೇಶಕ ಯೋಗೇಶ್ವರ್‌ ತಿಳಿಸಿದ್ದಾರೆ.


Spread the love