Home Mangalorean News Kannada News ಉಡುಪಿ ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ

ಉಡುಪಿ ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ

Spread the love

ಉಡುಪಿ ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ

ಉಡುಪಿ: ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಈ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ‌ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್ ನ ಪ್ರಭಾಕರ ಪೂಜಾರಿ ಹಾಗೂ ಒಳಕಾಡು ವಾರ್ಡ್ ನ ರಜನಿ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದರು. ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣಾಧಿಕಾರಿ ಘೋಷಿಸಿದರು. ಈ ಸಂದರ್ಭದಲ್ಲಿ ಡಾ.ರಾಯಪ್ಪ ಹಾಜರಿದ್ದರು.

ಒಟ್ಟು 35 ಸಂಖ್ಯಾಬಲ ಇರುವ ನಗರಸಭೆಯಲ್ಲಿ ಬಿಜೆಪಿ 32 ಹಾಗೂ ಕಾಂಗ್ರೆಸ್ 3 ಸದಸ್ಯರನ್ನು ಹೊಂದಿದೆ.


Spread the love

Exit mobile version