Home Mangalorean News Kannada News ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ

Spread the love

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಪ್ರಯುಕ್ತ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ವೈ.ಸುದರ್ಶನ್ ರಾವ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಡಾ.ವೈ.ಸುದರ್ಶನ್ ರಾವ್, ಕಂಪ್ಯೂಟರ್, ಮೊಬೈಲ್‌ಗಳ ಪರಿಣಾಮವಾಗಿ ಮನುಷ್ಯ ತನ್ನ ಮೆದುಳಿನ ಶಕ್ತಿಯನ್ನು ಕಳೆದು ಕೊಳ್ಳುತ್ತಿದ್ದಾನೆ. ಹಾಗಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳುವುದು ಅತೀ ಅಗತ್ಯ ವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಮನೆಯಲ್ಲಿ ಪುಸ್ತಕಾಲಯವನ್ನು ಸ್ಥಾಪಿಸ ಬೇಕು. ಪುಸ್ತಕ ಓದುವವುದರಿಂದ ಭಾಷೆ ಮೇಲೆ ಹಿಡಿತ ಬರುತ್ತದೆಯೇ ಹೊರತು ಮೊಬೈಲ್, ಟಿವಿಗಳಿಂದಲ್ಲ ಎಂದು ಅಭಿಪ್ರಾಯ ಪಟ್ಟರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅವರಿಗೆ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪುಸ್ತಕ ಹಸ್ತಾಂತರಿಸಿದರು. ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ, ಕಾರ್ಯದರ್ಶಿ ಡಾ.ಗಣನಾಥ್ ಎಕ್ಕಾರ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ ಮಾತನಾಡಿದರು.

ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಸದಸ್ಯರಾದ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್, ಕಸಾಪ ಜಿಲ್ಲಾ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ, ಪತ್ರಕರ್ತರ ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಮನೆಯೇ ಗ್ರಂಥಾಲಯದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು


Spread the love

Exit mobile version