ಉಡುಪಿ ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗೆ ಆಹಾರ ಸಾಮಾಗ್ರಿ ಕಿಟ್ ಹಸ್ತಾಂತರ
ಉಡುಪಿ : ಉಡುಪಿ ಪ್ರೆಸ್ ಕ್ಲಬ್ ವತಿಯಿಂದ ಉಡುಪಿ ನಗರ ವ್ಯಾಪ್ತಿಯ ಪತ್ರಕರ್ತ ಸದಸ್ಯರಿಗೆ ಬ್ಯಾಂಕ್ ಆಫ್ ಬರೋಡಾ ವತಿಯಿಂದ ನೀಡಿರುವ ದಿನಸಿ ಸಾಮಾಗ್ರಿಗಳನ್ನು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಹಸ್ತಾಂತರ ಮಾಡಲಾಯಿತು.
ಸದಸ್ಯರಿಗೆ ಬ್ಯಾಂಕ್ ಆಫ್ ಬರೋಡಾ ಉಡುಪಿ ವಿಭಾಗೀಯ ವ್ಯವಸ್ಥಾಪಕರಾದ ರವೀಂದ್ರ ರೈ ಅವರು ಪತ್ರಕರ್ತರಿಗೆ ಸಾಂಕೇತಿಕವಾಗಿ ದಿನಸಿ ಸಾಮಾಗ್ರಿಗಳ ಕಿಟನ್ನು ವಿತರಿಸಿದರು.
ಬಳಿಕ ಮಾತನಾಡಿದ ಅವರು ಕೋವಿಡ್ -19 ಸೋಂಕು ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಯ ಜೊತೆಯಲ್ಲಿ ಪತ್ರಕರ್ತರು ಸಹ ಮಹತ್ತರ ಸೇವೆಯನ್ನು ನೀಡುತ್ತಿದ್ದಾರೆ. ಕೋವಿಡ್ ನಿಯಂತ್ರಣದ ಜಾಗೃತಿ ನೀಡುವ ಕೆಲಸ ಪತ್ರಕರ್ತರಿಂದ ನಡೆಯುತ್ತಿದ್ದು ಅಂತಹ ಪತ್ರಕರ್ತರಿಗೆ ಬ್ಯಾಂಕಿನ ವತಿಯಿಂದ ಕಿಂಚಿತ್ ಸಹಾಯ ಮಾಡುವ ಉದ್ದೇಶದಿಂದ ದಿನಸಿ ಸಾಮಾಗ್ರಿಗಳನ್ನು ನೀಡಲಾಗಿದೆ ಎಂದರು.
ಈ ವೇಳೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು, ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ, ಕಾರ್ಯಕಾರಿ ಸಮಿತಿ ಸದಸ್ಯೆ ನೆಲ್ಲಿಜೆ ನವ್ಯಜ್ಯೋತಿ, ಮಾಜಿ ಅಧ್ಯಕ್ಷ ಜಯಕರ್ ಸುವರ್ಣ ಹಾಗೂ ಇತರರು ಉಪಸ್ಥಿತರಿದ್ದರು. ನಾಗರಾಜ್ ರಾವ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.