ಉಡುಪಿ: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2014-15ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ ಮಾಡಿದರು.
ಭಾನುವಾರ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ವಾರ್ಷಿಕ ವರದಿ ಹಾಗೂ ಪರಿಶೋಧಿಕ ಲೆಕ್ಕಪತ್ರ ಮಂಡಿಸಿದರು.
ವರದಿ ಸಾಲಿನ ಅಂತ್ಯಕ್ಕೆ ಸಂಘ 23,097 ಸದಸ್ಯರಿಂದ 3.47 ಕೋಟಿ ಪಾಲು ಬಂಡವಾಳ ಹಾಗೂ 202.79 ಕೋಟಿ ರೂ.ಠೇವಣಿ ಸಂಗ್ರಹಿಸಿದೆ. 180.64 ಕೋಟಿ ರೂ. ಹೊರಬಾಕಿ ಸಾಲವಿದೆ.ವರದಿ ಸಾಲಿನಲ್ಲಿ ಸಂಘ 2 ಕೋಟಿ 99 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ನಿರಂತರವಾಗಿ 15 ವರ್ಷಗಳಿಂದ ಶೇ.15 ಡಿವಿಡೆಂಡ್ ಘೋಷಿಸುತ್ತಿದ್ದು, ಈ ಬಾರಿಯೂ ಶೇ.15 ಡಿವಿಡೆಂಡ್ ಘೋಷಿಸುತ್ತಿರುವುದಾಗಿ ತಿಳಿಸಿದರು.
ಸಭೆಯಲ್ಲಿ ಆರ್ಥಿಕವಾಗಿ ಹಿಂದಉಳಿದ ಸದಸ್ಯರ ಎಲ್ಲಾ ಮಕ್ಕಳಿಗೆ ವಿದ್ಯಾರ್ಥಿ ಸಹಾಯಧನ, ಸ್ವಸಹಾಯ ಸಂಘದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಇತರ ಸವಲತ್ತುಗಳನ್ನು ವಿತರಿಸಲಾಯಿತು.ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಧನ ನೀಡಿ ಗೌರವಿಸಲಾಯಿತು. ಸಂಘದ ಎಲ್ಲಾ ಸಿಬ್ಬಂದಿಯವರಿಗೆ ದೈನಿಕ ಠೇವಣಿ ಸಂಗ್ರಹಗಾರರಿಗೆ ಸಾಗೂ ಅವರ ಕುಟುಂಬದ ಸದಸ್ಯರಿಗೆ 2 ಲಕ್ಷ ರೂ. ವೈದ್ಯಕೀಯ ವೆಚ್ಚ ಭರಿಸುವ ವಿಮಾ ಪಾಲಿಸಿಗಳನ್ನು ವಿತರಿಸಲಾಯಿತು. ಇಂದ್ರಾಳಿಯ ಯಕ್ಷಗಾನ ಕೇಂದ್ರದ ಮಕ್ಕಳಿಗೆ ಪೆÇ್ರೀತ್ಸಾಹ ಧನ ವಿತರಿಸಲಾಯಿತು.
ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಸಂಘದ ಆಡಳಿತ ಮಂಡಳಿ ಸದಸ್ಯರಾದ ಸಿಎಫ್ ಹರ್ಬರ್ಟ್, ಪುರುಷೋತ್ತಮ ಪಿ. ಶೆಟ್ಟಿ, ಹಾಜಿ ಸೈಯದ್ ಅಬ್ದುಲ್ ರಜಾಕ್, ವಸಂತ ಕೆ. ಕಾಮತ್, ವಿನಯ್ ಕುಮಾರ್ ಟಿಎ., ಜಯಾನಂದ ಸಿ. ಮೈಂದನ್, ಪದ್ಮನಾಭ ಕೆ. ನಾಯಕ್, ಜಯಶೆಟ್ಟಿ ಗಾಯತ್ರಿ ಎಸ್. ಭಟ್ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಸಂಜೀವ ಕಾಂಚನ್ ಸ್ವಾಗತಿಸಿ, ಉಪಾಧ್ಯಕ್ಷ ಎಲ್. ಉಮಾನಾಥ್ ವಂದಿಸಿದರು.