ಉಡುಪಿ: ಬಿಜೆಪಿಗರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನಕ್ಕೆ ಸೆಡ್ಡು ಹೊಡೆದ ಕಾಂಗ್ರೆಸ್ ಕಾರ್ಯಕರ್ತರು

Spread the love

ಉಡುಪಿ: ಬಿಜೆಪಿಗರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನಕ್ಕೆ ಸೆಡ್ಡು ಹೊಡೆದ ಕಾಂಗ್ರೆಸ್ ಕಾರ್ಯಕರ್ತರು

ಉಡುಪಿ : ನೂತನ ರಾಜ್ಯಸಭಾ ಸದಸ್ಯರಾಗಿ ನಾಸೀರ್ ಹುಸೇನ್ ಗೆದ್ದ ಸಂಭ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧದಲ್ಲೇ ದೇಶ ವಿರೋಧಿ ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡ ಸಂದರ್ಭದಲ್ಲಿ ಇನ್ನೊಂದೆಡೆ ಕಾಂಗ್ರೆಸ್ ಕಚೇರಿ ಮುಂಭಾಗ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಕಚೇರಿ ಮುಂಭಾಗ ಜಮಾಯಿಸಿದ್ದರು.

 

ಈ ವೇಳೆ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ರಾಜ್ಯ ಸಭಾ ಚುನಾವಣಾ ಫಲಿತಾಂಶದಿಂದ ಬಿಜೆಪಿಗರು ಹತಾಶರಾಗಿದ್ದು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ನಾಟಕ ಮಾಡಿದ್ದಾರೆ. ಕೇವಲ 50-60 ಮಂದಿ ಆಗಮಿಸಿ ಬ್ರಹ್ಮಗಿರಿಯ ಬಳಿಯಲ್ಲೇ ನಮ್ಮನ್ನು ಬಂಧಿಸಿ ಎಂದು ಪೋಲಿಸರಿಗೆ ಮೊದಲೇ ತಿಳಿಸ ನಾಟಕವಾಡಿದ್ದಾರೆ. ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಂದರೆ ನಾವೇನೂ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪಕ್ಷ ಕಾಂಗ್ರೆಸ್ ಆಗಿದ್ದು ಬಿಜೆಪಿಗರಿಗೆ ತಕ್ಕ ಉತ್ತರ ನೀಡಲು ಸಿದ್ದರಿದ್ದೇವೆ ಎಂದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಹೆಗ್ಡೆ, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳಕೆಬೈಲು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಕಾಂಗ್ರೆಸ್ ನಾಯಕರಾದ ವೆರೋನಿಕಾ ಕರ್ನೆಲಿಯೋ, ಹರೀಶ್ ಕಿಣಿ, ಮಮತಾ ಶೆಟ್ಟಿ, ದೀಪಕ್ ಕೋಟ್ಯಾನ್, ಹಮ್ಮದ್, ಯತೀಶ್ ಕರ್ಕೇರಾ ಹಾಗೂ ಇತರರು ಉಪಸ್ಥಿತರಿದ್ದರು.


Spread the love