Home Mangalorean News Kannada News ಉಡುಪಿ: ಬೆಂಕಿ ಅವಘಡದಲ್ಲಿ ಸುಟ್ಟು ಕರಕಲಾದ ಹೋಟೆಲ್

ಉಡುಪಿ: ಬೆಂಕಿ ಅವಘಡದಲ್ಲಿ ಸುಟ್ಟು ಕರಕಲಾದ ಹೋಟೆಲ್

Spread the love

ಉಡುಪಿ: ಬೆಂಕಿ ಅವಘಡದಲ್ಲಿ ಸುಟ್ಟು ಕರಕಲಾದ ಹೋಟೆಲ್

ಉಡುಪಿ: ನಗರದ ಕರಾವಳಿ ಜಂಕ್ಷನ್ ಬಳಿಯಲ್ಲಿ ಇರುವ ಹೋಟೆಲ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

ಮಲ್ಪೆ ರಸ್ತೆಯಲ್ಲಿ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಎಂಬ ಹೋಟೆಲ್ ನಲ್ಲಿ ಸಂಜೆ ವೇಳೆಗೆ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದ್ದು ಘಟನೆಯಿಂದ ಹೋಟೆಲ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.

ಕಳೆದ ಕೆಲ ದಿನಗಳಿಂದ ಹೋಟೆಲಿನಲ್ಲಿ ಮಾಲಿಕರು ವ್ಯಾಪಾರ ಸ್ಥಗಿತಗೊಳಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.


Spread the love

Exit mobile version