ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಬಿ ಪಿ ರಮೇಶ್ ಪೂಜಾರಿ ನಿಧನ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರಾದ ಬಿ ಪಿ ರಮೇಶ್ ಪೂಜಾರಿ ಬಡಾನಿಡಿಯೂರು ಅವರು ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಕಾಂಗ್ರೆಸ್ ಪಕ್ಷದಲ್ಲಿ ಹುದ್ದೆಗಳನ್ನು ಅಲಂಕರಿಸುವುದರೊಂದಿಗೆ ಶ್ರೀಬ್ರಹ್ಮಬೈದರ್ಕಳ ಪಂಚಧೂಮಾವತೀ ಗರೋಡಿ ತೋನ್ಸೆ ಇದರ ಜೀರ್ಣೋದ್ಧಾರ ಸಮಿತಿ, ತೋನ್ಸೆ ಗರಡಿಯ ಗುರಿಕಾರರು, ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಜೀರ್ಣೋದ್ದಾರ ಸಮಿತಿಯ ಕಾರ್ಯಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ನಿಧನಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಸಂತಾಪ ಸೂಚಿಸಿದ್ದಾರೆ.