ಉಡುಪಿ | ಮನೆಯ ಮೇಲೆ ಬಿದ್ದ ಬೃಹತ್ ಆಲದ ಮರ, ದಂಪತಿಗಳಿಗೆ ಗಾಯ
- ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಯಶ್ಪಾಲ್ ಸುವರ್ಣ
ಉಡುಪಿ: ನಗರದ ಕಡಿಯಾಳಿ ವಾರ್ಡಿನಲ್ಲಿ ಡಾ. ವಿ. ಎಸ್. ಆಚಾರ್ಯ ಮನೆ ಪರಿಸರದ ಕಟ್ಟೆ ಆಚಾರ್ಯ ಮಾರ್ಗದಲ್ಲಿ ಭಾರೀ ಪ್ರಮಾಣದ ಸುಂಟರ ಗಾಳಿಗೆ ಬೃಹತ್ ಗಾತ್ರದ ಅಶ್ವತ್ಥ ಮರ ಮನೆಯ ಮೇಲೆ ಬಿದ್ದು ಪೂರ್ಣ ಪ್ರಮಾಣದ ಹಾನಿಯಾಗಿದ್ದು, ಮನೆಯಲ್ಲಿದ್ದ ರಾಘವೇಂದ್ರ ಭಟ್ ಹಾಗೂ ನೀರಜ ರವರು ಗಾಯಗೊಂಡ ಹಿನ್ನಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿದರು.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಘವೇಂದ್ರ ಭಟ್ ಹಾಗೂ ನೀರಜ ರವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಅಗ್ನಿಶಾಮಕ ದಳ ಹಾಗೂ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಶಾಸಕರು ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಹಾನಿಯ ಬಗ್ಗೆ ವರದಿ ನೀಡಿ ಗರಿಷ್ಠ ಮೊತ್ತದ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಗಿರೀಶ್ ಅಂಚನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.