ಉಡುಪಿ: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ!

Spread the love

ಉಡುಪಿ: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ!

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಕಾಣೆಯಾದವರ ಚಹರೆ: ಲಕ್ಷ್ಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ.

ಅಪೂರ್ವ 3 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಶ್ರೇಯಾ 3 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ.

ಮನೋಜ್ 2 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments