Home Mangalorean News Kannada News ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಸೂಚನಾ ಫಲಕ, ಪ್ರತಿಫಲಕ ಅಳವಡಿಸಿ’ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಸೂಚನಾ ಫಲಕ, ಪ್ರತಿಫಲಕ ಅಳವಡಿಸಿ’ ಜಿಲ್ಲಾಧಿಕಾರಿ ಸೂಚನೆ

Spread the love

ಉಡುಪಿ: ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಅಪ ಘಾತ ವಲಯಗಳಲ್ಲಿ ಸೂಚನಾ ಫಲಕ, ಪ್ರತಿಫಲಕಗಳನ್ನು ಅಳವಡಿಸಿ. ಒಳ ರಸ್ತೆಯಿಂದ ಪ್ರಮುಖ ರಸ್ತೆಗೆ ಸಂಪರ್ಕಿ ಸುವ ಕಡೆ ರಸ್ತೆ ಉಬ್ಬುಗಳನ್ನು ನಿರ್ಮಿಸಿ  ಎಂದು ಜಿಲ್ಲಾಧಿಕಾರಿ ಡಾ. ಆರ್‌. ವಿಶಾಲ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

01udp-dc

ಜಿಲ್ಲಾಧಿಕಾರಿ ಕಚೇರಿಯಲ್ಲಿ  ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಅವರು, ರಸ್ತೆ ಉಬ್ಬು ಅಳವಡಿ ಸುವಂತೆ ಈ ಹಿಂದೆಯೇ ಸೂಚನೆ ನೀಡಿದ್ದರೂ ಕ್ರಮ ಕೈಗೊಂಡಿಲ್ಲ. ರಸ್ತೆ ಕಾಮಗಾರಿ ಪೂರ್ಣವಾಗಿಲ್ಲ ಎಂಬ ಸಬೂಬು ಹೇಳುವುದು ಸರಿಯಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ರಸ್ತೆ ಉಬ್ಬುಗಳನ್ನು ನಿರ್ಮಾಣ ಮಾಡಿ. ಮುಂದಿನ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಎಂದರು.

ಜಿಲ್ಲೆಗೆ ಮಂಜೂರಾದ ಕೇಂದ್ರೀಯ ವಿದ್ಯಾಲಯದ ಶಾಶ್ವತ ಕಟ್ಟಡಕ್ಕಾಗಿ ಅಲೆ ವೂರಿನಲ್ಲಿ 10 ಎಕರೆ ಜಾಗವನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಕೋಟಾ, ವಾರಂಬಳ್ಳಿ ಸೇರಿದಂಯೆ ಹಲವೆಡೆ ಆಟೋ ಪಾರ್ಕಿಂಗ್‌ಗೆ ಅವಕಾಶ ಇಲ್ಲದಿರುವ ಬಗ್ಗೆ ಆಟೋ ಚಾಲಕರು ಮನವಿ ಸಲ್ಲಿಸಿದ್ದಾರೆ. ಆದ್ದರಿಂದ ಪಾರ್ಕಿಂಗ್ ಸ್ಥಳ ಗುರುತಿಸಿ ಎಂದು ಪೌರಾ ಯುಕ್ತರು ಮತ್ತು ಪ್ರಾದೇಶಿಕ ಸಾರಿಗೆ ಅಧಿ ಕಾರಿಗೆ ಸೂಚನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಅವಧಿ ಯೊಳಗೆ ಮುಗಿಸುವಂತೆ ನವ ಯುಗ ಕಂಪೆನಿ ಹಾಗೂ ಐಆರ್‌ಬಿ ಕಂಪೆನಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಉಡುಪಿಯ ಬಸ್ ನಿಲ್ದಾಣದಲ್ಲಿ ರಾತ್ರಿ ಸೂಕ್ತ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಶೌಚಾಲಯ, ಆಸನ ವ್ಯವಸ್ಥೆ ಸರಿಪಡಿಸಿ ಎಂದು ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಮಾತನಾಡಿ, ಐದು ತಿಂಗಳಿ ನಲ್ಲಿ ಜಿಲ್ಲೆಯಲ್ಲಿ ನಡೆದ ಅಪಘಾತಗಳ ವಿಶ್ಲೇಷಣೆ ಮಾಡಲಾಗಿದೆ. ತಿರುವು ರಸ್ತೆಗಳಲ್ಲಿ ಸೂಚನಾ ಫಲಕಗಳಿಲ್ಲದಿ ರುವುದೇ ಅಪಘಾತಕ್ಕೆ ಮುಖ್ಯ ಕಾರಣ ಎಂದು ಗೊತ್ತಾಗಿದೆ. ಅಲ್ಲದೆ ಅಪಘಾತ ಸಂಭವಿಸಲು ಇರುವ ಇತರ ಕಾರಣ ಗಳನ್ನೂ ಹಾಗೂ ಅಪಘಾತ ವಲಯ ಗಳನ್ನೂ ಈಗಾಗಲೇ ಗುರುತಿಸಲಾಗಿದೆ. ಪರಿಹಾರದ ಬಗ್ಗೆ ವರದಿಯನ್ನೂ ಸಿದ್ಧ ಪಡಿಸಲಾಗಿದೆ ಎಂದರು.

ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿ ಕಾರಿ ಫೆಲಿಕ್ಸ್‌ ಡಿಸೋಜ ಮಾತನಾಡಿ, ಶಾಲಾ– ಕಾಲೇಜುಗಳ ವಾಹನಗಳಿಗೆ ವೇಗ ನಿಯಂತ್ರಣ ಅಳವಡಿಸಲು ಈಗಾ ಗಲೇ ಕ್ರಮ ಕೈಗೊಳ್ಳಲಾಗಿದೆ. ಬಸ್‌ ಗಳಿಂದ ಕರ್ಕಶ ಹಾರ್ನ್‌ ತೆಗೆಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವ ಹಣಾಧಿಕಾರಿ ಎಂ. ಕನಗವಲ್ಲಿ  ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

Exit mobile version