Spread the love
ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಮೃತ್ ಶೆಣೈ
ಉಡುಪಿ: ಉದ್ಯಮಿ, ಮಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಅಮೃತ್ ಶೆಣೈಯವರನ್ನು ಕಾಂಗ್ರೆಸ್ ಪಕ್ಷದ ಉಡುಪಿ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಮೋದ್ ಮಧ್ವರಾಜ್ ಅವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ.
ಈ ಹಿಂದೆ ಅಮೃತ್ ಶೆಣೈ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಉಡುಪಿ – ಚಿಕ್ಕಮಗಳೂರು ಲೋಕಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
Spread the love