Home Mangalorean News Kannada News ಉಡುಪಿ: ಸಂತೆಕಟ್ಟೆ ಮೌಂಟ್ ರೋಸರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಸ್ಪರ್ಧೆಗಳು

ಉಡುಪಿ: ಸಂತೆಕಟ್ಟೆ ಮೌಂಟ್ ರೋಸರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಸ್ಪರ್ಧೆಗಳು

Spread the love

ಉಡುಪಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂತೆಕಟ್ಟೆ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ವಿದ್ಯಾರ್ಥಿಗಳಿಗೆ ದೇಶಭಕ್ತಿಗೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಚರ್ಚ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

Patriotic songs singing contest_santhkatte 18-08-2015 09-45-57

ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಶಿಕ್ಷಣ ಸೊಸಾಯ್ಟಿ ಇದರ ನಿರ್ದೇಶಕರಾದ ವಂ. ಡಾ. ಲಾರೆನ್ಸ್ ಡಿ’ಸೋಜಾ ಮಾತನಾಡಿ ಮಕ್ಕಳಿಗೆ ಎಳೆ ಪ್ರಾಯದಲ್ಲಿ ಇಂತಹ ಸ್ಪರ್ಧೆಗಳ ಮೂಲಕ ದೇಶ ಪ್ರೇಮವನ್ನು ಮೂಡಿಸುವ ಕೆಲಸ ಹೆಚ್ಚು ಹೆಚ್ಚು ನಡೆಯಬೇಕು. ಇದರಿಂದ ಮುಂದೆ ಇದೇ ವಿದ್ಯಾರ್ಥಿಗಳೂ ತಮ್ಮ ದೇಶವನ್ನು ಯಾವುದೇ ಕಾರಣಕ್ಕೂ ತಿರಸ್ಕಾರ ಭಾವದಿಂದ ಕಾಣುವುದನ್ನು ಬಿಟ್ಟು ದೇಶ, ದೇಶದ ಸಂವಿಧಾನ, ರಾಷ್ಟ್ರಧ್ವಜವನ್ನು ಗೌರವಿಸುವ ಉತ್ತಮ ನಾಗರಿಕರಾಗಿ ಬದಕಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾರ್ಥಿಗಳಿಎ ದೇಶಭಕ್ತಿಗೀತೆಗಳ ಗಾಯನ, ನಟನೆ, ಭಾಷಣ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ವಂ ಫಿಲಿಪ್ ನೆರಿ ಆರಾನ್ಹಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಿತ್ಯಾನಂದ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಎಡ್ರಿಯನ್ ಸ್ವಾಗತಿಸಿ, ಸಹ ಶಿಕ್ಷಕಿ ವನಿತಾ ವಂದಿಸಿದರು. ಸಿಸ್ಟರ್ ಅನಮಿತ ಕಾರ್ಯಕ್ರಮ ನಿರೂಪಿಸಿದರು.


Spread the love

Exit mobile version