ಉಡುಪಿ: ಹಿಜಾಬ್ ನಿಷೇಧ ಆದೇಶ ವಾಪಾಸ್ ಸಿಎಂ ಹೇಳಿಕೆಗೆ ವಿಶ್ವ ಹಿಂದು ಪರಿಷದ್ ವಿರೋಧ
ಉಡುಪಿ: ಕರ್ನಾಟಕದಲ್ಲಿ ಶಾಲಾ ಕಾಲೇಜುಗಳಲ್ಲಿ ವಿಧ್ಯಾರ್ಥಿಗಳು ಹಿಜಾಬ್ ಧರಿಸಿ ಬರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ತೀವ್ರವಾಗಿ ಖಂಡಿಸಿದೆ
ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಗಳಿಗೆ ಸಮವಸ್ತ್ರ ಕಡ್ಡಾಯ ಇರುವುದರಿಂದ ಯಾವುದೆ ಜಾತಿ, ಮತ, ಭೇಧ ಬರುವುದಿಲ್ಲ. ಈ ವಿಚಾರದಲ್ಲಿ ರಾಜಕೀಯ ಲಾಭಕ್ಕೋಸ್ಕರ, ಒಂದು ವರ್ಗಗಳ ಓಲೈಕೆ ಮಾಡಲು ಇಂತಹ ಹೇಳಿಕೆಗಳನ್ನು ನೀಡಿ ರಾಜ್ಯದಲ್ಲಿ ಮತ್ತೆ ಅಶಾಂತಿಯ ವಾತಾವರಣ ಸೃಷ್ಟಿ ಮಾಡೋದು, ಮತ್ತು ಮಕ್ಕಳಲ್ಲಿ ಜಾತಿ, ಧರ್ಮದ ವಿಷ ಬೀಜ ಬಿತ್ತಿ ವಿಂಗಡನೆಗೊಳಿಸುವುದು ಸರಿಯಲ್ಲ. ಕೂಡಲೇ ಈ ಕ್ರಮವನ್ನು ಹಿಂಪಡೆಯಬೇಕು ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆಗ್ರಹಿಸಿದ್ದಾರೆ..
ಹಿಜಾಬ್ ಧರಿಸಿ ಬಂದರೆ ಹಿಂದು ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸಿ ಬನ್ನಿ
ಜಿಲ್ಲೆಯ ಯಾವುದೇ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬಂದರೆ ಹಿಂದು ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸಿ ಬನ್ನಿ.. ನಿಮ್ಮ ಎಲ್ಲಾ ಹೋರಾಟಗಳ ಜೊತೆ ವಿಶ್ವ ಹಿಂದು ಪರಿಷದ್ ಬಜರಂಗದಳ ಇದೆ ಎಂದು ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.