ಉಡುಪಿ: ಹಿರಿಯ ಕಾಂಗ್ರೆಸ್ ನಾಯಕಿ ಜಯಶ್ರೀ ಕೃಷ್ಣರಾಜ್ ನಿಧನ
ಉಡುಪಿ: ಹಿರಿಯ ಕಾಂಗ್ರೆಸ್ ನಾಯಕಿ ಉಡುಪಿ ನಗರಸಭೆಯ ಮಾಜಿ ಕೌನ್ಸಿಲರ್ ಜಯಶ್ರೀ ಕೃಷ್ಣರಾಜ್(68) ಅವರು ಹೃದಯಾಘಾತದಿಂದ ದೆಹಲಿಯಲ್ಲಿ ಸೋಮವಾರ ನಿಧನರಾದರು.
ಮಲ್ಪೆ ಮಧ್ವರಾಜ್ ಅವರ ಸಹೋದರ ಕೃಷ್ಣರಾಜ ಅವರ ಪತ್ನಿಯಾಗಿರುವ ಜಯಶ್ರೀ, ದೆಹಲಿಯಲ್ಲಿರುವ ಮಗಳ ಮನೆಯಲ್ಲಿ ನಿಧನರಾದರು.
ಹಿರಿಯ ಕಾಂಗ್ರೆಸ್ ನಾಯಕಿಯಾಗಿದ್ದ ಜಯಶ್ರೀ ಕೃಷ್ಣರಾಜ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಇದರ ಸದಸ್ಯೆಯಾಗಿ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಉಡುಪಿ ನಗರಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಲಯನ್ಸ್ ಕ್ಲಬ್ ಹಾಗೂ ಇನ್ನಿತರ ಮಹಿಳಾ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು.
ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.