ಉತ್ತಮ ನಾಯಕರನ್ನು ರೂಪಿಸುವಲ್ಲಿ ರಾಜ್ಯ ಶಾಸ್ತ್ರಜ್ಞರ ಪಾತ್ರ ಹಿರಿದು: ಡಿಡಿಪಿಐ ಮಾರುತಿ

Spread the love

ಉತ್ತಮ ನಾಯಕರನ್ನು ರೂಪಿಸುವಲ್ಲಿ ರಾಜ್ಯ ಶಾಸ್ತ್ರಜ್ಞರ ಪಾತ್ರ ಹಿರಿದು: ಡಿಡಿಪಿಐ ಮಾರುತಿ

ಉಡುಪಿ: ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘ ಇದರ ವಿಷಯಾಧಾರಿತ ಪುನಶ್ಚೇತನ ತರಬೇತಿ, ನಿವೃತ್ತ ಉಪನ್ಯಾಸಕರ ಸನ್ಮಾನ ಮತ್ತು ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ ಸಮಾರಂಭವು ಸರ್ಕಾರಿ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಇಲ್ಲಿಯ ಸಭಾಂಗಣದಲ್ಲಿ ನೆರವೇರಿತು.

ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ಶಾಲಾ ಶಿಕ್ಷಣ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ಅವರು ರಾಜ್ಯಶಾಸ್ತ್ರ ಅಧ್ಯಯನದ ಮಹತ್ವ ಮತ್ತು ಕಲಾವಿಭಾಗವನ್ನು ಪುನಶ್ಚೇತನ ಗೊಳಿಸುವ ಕುರಿತು ಮತ್ತು ಮುಂದಿನ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆಯುವಲ್ಲಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಕಾಲೇಜಿನ ಪ್ರಾಂಶುಪಾಲರಾದ ರವೀಂದ್ರ ಉಪಾಧ್ಯ ವಹಿಸಿದ್ದು 2023-24ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ಮೂಕಾಂಬಿಕಾ ದೇವಳ ಪದವಿ ಪೂರ್ವ ಕಾಲೇಜು ಕೊಲ್ಲೂರು ಇಲ್ಲಿಯ ವಿದ್ಯಾರ್ಥಿ ಸುನಿಲ್ ವೈ ಎಂ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ಸಾಣೂರು ಇಲ್ಲಿಯ ವಿಧ್ಯಾರ್ಥಿ ಸೌಮ್ಯ ಆಚಾರ್ಯ ಇವರಿಗೆ ನಗದು ಬಹುಮಾನ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಉಪನ್ಯಾಸಕರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿ ವಯೋ ನಿವೃತ್ತಿಯನ್ನು ಪಡೆದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ,ಇಲ್ಲಿಯ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಯುತ ದಯಾನಂದ ,ಡಿ. ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಬಸ್ರೂರು ಶಾರದಾ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀಯುತ ದಿನೇಶ್ ಹೆಗ್ಡೆ ಮೊಳಹಳ್ಳಿ ಉಪಸ್ಥಿತರಿದ್ದು ರಾಜ್ಯಶಾಸ್ತ್ರ ಉಪನ್ಯಾಸಕ ಸಂಘದ ಗೌರವಾಧ್ಯಕ್ಷರಾದ ಶ್ರೀಯುತ ವಾಸು ಮೊಗವೀರ ಪ್ರಾಸ್ತಾವಿಕ ಮಾತುಗಳೊಂದಿಗೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಎಡ್ವರ್ಡ್ ಲಾರ್ಸನ್ ಡಿಸೋಜ ವಂದಿಸಿ, ಸ.ಪ.ಪೂರ್ವ ಕಾಲೇಜು ಗೋಳಿಯಂಗಡಿಯ ರಾಜ್ಯಶಾಸ್ತ್ರ ಉಪನ್ಯಾಸಕ ನಿರೂಪಿಸಿದರು.


Spread the love
Subscribe
Notify of

0 Comments
Inline Feedbacks
View all comments