Home Mangalorean News Kannada News ಉದ್ಯಮಿ ಮನೆಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ : ಆರೋಪಿ ಬಂಧನ

ಉದ್ಯಮಿ ಮನೆಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ : ಆರೋಪಿ ಬಂಧನ

Spread the love

ಉದ್ಯಮಿ ಮನೆಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ : ಆರೋಪಿ ಬಂಧನ

ವಿಟ್ಲ ಬೋಳಂತೂರಿನ‌ ಉದ್ಯಮಿಯ ಮನೆಯಲ್ಲಿ, ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಅಂತರಾಜ್ಯ ದರೋಡೆಕೋರನ ಬಂಧನ, ಕಾರು, ನಗದು ವಶ

ದಿನಾಂಕ;03-01-2025 ರಂದು ರಾತ್ರಿ, ಬಂಟ್ವಾಳ ತಾಲೂಕು, ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಉದ್ಯಮಿಯೊಬ್ಬರ ಮನೆಗೆ 06 ಜನ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 02/2025 ರಂತೆ ಪ್ರಕರಣ ದಾಖಲಿಸಿಕೊಂಡು, ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ರವರ ಅದೇಶದ ಮೇರೆಗೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಿ, ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿ, ದಿನಾಂಕ:23-01-2025 ರಂದು ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿತನಾದ

ಅನಿಲ್‌ ಫರ್ನಾಂಡಿಸ್‌ ಪ್ರಾಯ 49 ವರ್ಷ, ವಾಸ:ಯಸುದಾಸ್‌ ಲಿಯೋನ್‌ ಫರ್ನಾಂಡಿಸ್‌ , ಟ್ರಿನಿಟಿ ವಿಲ್ಲಾ ಚಿರಕರ್‌ ಜಂಕ್ಷನ್‌ ಮಾತಿಲಿಲ್‌ ಅಂಚೆ, ತ್ರಿಕ್ಕಡವೂರ್‌ ,ಪೆರಿನಾಡ್‌, ಕೊಲ್ಲಂ ಜಿಲ್ಲೆ ಕೇರಳ ರಾಜ್ಯ.
ಹಾಲಿ ವಾಸ:ಪಲವಿಲ್ಲ ಮನೆ, ಮಾತಿಲಿಲ್‌, ಅಂಚೆ ತ್ರಿಕ್ಕಡವೂರ್‌ ಪೆರಿನಾಡ್‌, ಕೊಲ್ಲಂ ಜಿಲ್ಲೆ ಕೇರಳ ರಾಜ್ಯ ಎಂಬಾತನನ್ನು ಬಂಧಿಸಿ, ಕೃತ್ಯಕ್ಕೆ ಉಪಯೋಗಿಸಿದ KL-02-BP-1104ನೇ ನೊಂದಣಿ ನಂಬ್ರದ ಎರ್ಟಿಗಾ ಕಾರು, 5,00,000/-ರೂ ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ TN-20-DB-5517ನೇ ನಂಬರ ಪ್ಲೇಟ್‌ನ್ನು ವಶಪಡಿಸಿಕೊಂಡಿದ್ದು, ಸ್ವಾದೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ- 11,00,000/- ರೂ ಆಗಬಹುದು. ಸದ್ರಿ ಪ್ರಕರಣದಲ್ಲಿ ಉಳಿದ ಆರೋಪಿಗಳ ದಸ್ತಗಿರಿಗೆ ಬಾಕಿ ಇರುತ್ತದೆ.

ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಿರುತ್ತದೆ.


Spread the love

Exit mobile version