Home Mangalorean News Kannada News ಉಪಚುನಾವಣೆ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡುವ ಸಾಧ್ಯತೆ

ಉಪಚುನಾವಣೆ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡುವ ಸಾಧ್ಯತೆ

Spread the love

ಉಪಚುನಾವಣೆ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡುವ ಸಾಧ್ಯತೆ  

ಮಂಗಳೂರು: ಜಿಲ್ಲಾಡಳಿತ ವತಿಯಿಂದ ಆಯೋಜಿಸಲು ಉದ್ದೇಶಿಸಲಾಗಿರುವ ಬಹು ನಿರೀಕ್ಷಿತ ಪಿಲಿಕುಳ “ನೇತ್ರಾವತಿ- ಫಲ್ಗುಣಿ’ ಜೋಡುಕರೆ ಕಂಬಳ ಮೂಡುಶೆಡ್ಡೆ ಪಂಚಾಯತ್ ಚುನಾವಣೆ ಕಾರಣಕ್ಕೆ ಮುಂದೂಡಿಕೆಯಾಗುವ ಬಹುತೇಕ ಸಾಧ್ಯತೆಯಿದೆ.

ಹತ್ತು ವರ್ಷಗಳ ಬಳಿಕ ಇದೀಗ ನ.17 ಮತ್ತು 180 ಪಿಲಿಕುಳದ ಜೋಡುಕರೆಯಲ್ಲಿ ಕಂಬಳ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಈ ನಡುವೆ ಪಿಲಿಕುಳ ವ್ಯಾಪ್ತಿಯ ಮೂಡುಶೆಡ್ಡೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸದಸ್ಯ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.

ನ.23ರಂದು ಚುನಾವಣೆ ನಡೆಯಲಿದ್ದು, ಇದರಿಂದಾಗಿ ಕಂಬಳ ಅಯೋಜಿಸಿದರೆ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ.ಆದ್ದರಿಂದ ಈ ಬಗ್ಗೆ ನ.11ರಂದು ಜಿಲ್ಲಾಡಳಿತ, ಕಂಬಳ ಸಮಿತಿಯವರ ಸಭೆ ನಡೆಯಲಿದ್ದು, ಇದರಲ್ಲಿ ತೀರ್ಮಾನವಾಗುವ ಸಾಧ್ಯತೆಯಿದೆ. ಒಂದು ವೇಳೆ ಕಂಬಳ ಮುಂದೂಡಿಕೆಯಾದರೆ ನ.17ರಂದು ಪೂರ್ವಭಾವಿ ಕುದಿ ಕಂಬಳ ಆಯೋಜಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಕಂಬಳದ ಮುಂದಿನ ದಿನಾಂಕವೂ ಅಂತಿಮಪಡಿಸುವ ಸಾಧ್ಯತೆಯೂ ಇದೆ ಎಂದು ತಿಳಿದು ಬಂದಿದೆ.


Spread the love

Exit mobile version