ಉಪ ಚುನಾವಣೆ | ರಾಜ್ಯದ ಪೈಕಿ ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಣೆ
ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದರೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾದ ನಂತರ ತೆರವಾಗಿದ್ದ, ಈ ಕ್ಷೇತ್ರದಿಂದ ಅವರ ಪುತ್ರ ಭರತ್ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಟಿಕೆಟ್ ಲಭಿಸಿದೆ.
ಸಂಡೂರು ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದ ಕಾಂಗ್ರೆಸ್ ಶಾಸಕ ಈ.ತುಕಾರಾಮ್, ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಈ ಕ್ಷೇತ್ರದಿಂದ ಬಿಜೆಪಿಯು ಬಂಗಾರು ಹನುಮಂತು ಅವರನ್ನು ಕಣಕ್ಕಿಳಿಸಿದೆ.