ಉರ್ವ ಕಾಫಿ ಬಂಗಲೆ – ಸುಲ್ತಾನ್ ಬತ್ತೇರಿ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಬೆಂಬಲ ಅತ್ಯಗತ್ಯ – ಶಾಸಕ ಕಾಮತ್

Spread the love

ಉರ್ವ ಕಾಫಿ ಬಂಗಲೆ – ಸುಲ್ತಾನ್ ಬತ್ತೇರಿ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಬೆಂಬಲ ಅತ್ಯಗತ್ಯ – ಶಾಸಕ ಕಾಮತ್

ಉರ್ವ ಕಾಫಿ ಬಂಗಲೆಯಿಂದ ಬೋಳೂರು ಸುಲ್ತಾನ್ ಬತ್ತೇರಿ ಸಂಪರ್ಕಿಸುವ ರಸ್ತೆ ಅಗಲೀಕರಣ ಕಾಮಗಾರಿಗೆ ಪೂರಕವಾಗಿ ಶಾಸಕ ವೇದವ್ಯಾಸ್ ಕಾಮತ್ ಅವರು ಉರ್ವ ಬಿಲ್ಲವ ಸಂಘದ ಸಭಾಂಗಣದಲ್ಲಿ ಸಾರ್ವಜನಿಕರ ಸಭೆ ನಡೆಸಿದರು. ರಸ್ತೆ ಅಗಲೀಕರಣದಿಂದ ಸಮಸ್ಯೆಯಾಗುವ ಕುರಿತು ಸಾರ್ವಜನಿಕರು ಶಾಸಕರ ಬಳಿ ಅಳಲು ತೋಡಿಕೊಂಡಿದ್ದರು. ರಸ್ತೆ ಅಗಲೀಕರಣದ ಸಂಧರ್ಭದಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕಾಮಗಾರಿ ನಡೆಸುವ ನಿಟ್ಟಿನಲ್ಲಿ ಶಾಸಕರು ಸ್ಥಳೀಯ ನಿವಾಸಿಗಳನ್ನು ಸಭೆ ಸೇರಿಸಿ ಅವರ ಬೇಡಿಕೆಗಳನ್ನು ಪರಿಶೀಲಿಸಿ ಒಮ್ಮತದಿಂದ ರಸ್ತೆ ಅಭಿವೃದ್ಧಿಗೆ ಕೈ ಜೋಡಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕರು, ಈಗಾಗಲೇ ಲೇಡಿಹಿಲ್ ವೃತ್ತದಿಂದ ಉರ್ವ ಮಾರ್ಕೇಟ್ ವರೆಗಿನ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.ಮುಂದುವರಿದ ಭಾಗವಾಗಿ ನಡೆಯುವ ಈ ಕಾಮಗಾರಿಗೆ ಸ್ಥಳೀಯರ ಸಹಕಾರ ಬೇಕಾಗಿದೆ. ಮಂಗಳೂರು ಅಭಿವೃದ್ಧಿಯತ್ತ ದಾಪುಗಾಲಿಡುವ ಸಂಧರ್ಭದಲ್ಲಿ ನಗರದಲ್ಲಿ ಉತ್ತಮ ರಸ್ತೆ ನಿರ್ಮಾಣಕ್ಕೆ ವಿಶೇಷ ಒತ್ತು ನೀಡಲಾಗುತ್ತಿದ್ದು, ಸಾರ್ವಜನಿಕರನ್ನೂ ಕೂಡ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಾದ ಕರ್ತವ್ಯ ನಮ್ಮದಾಗಿದೆ ಎಂದರು. ಸುಲ್ತಾನ್ ಬತ್ತೇರಿ ಪ್ರದೇಶವು ಮಂಗಳೂರಿನ ಇತಿಹಾಸದಲ್ಲಿ ಸ್ಥಾನ ಪಡೆದ ಪ್ರದೇಶವಾಗಿದ್ದು,ಮುಂದೆ ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಅಭಿವೃದ್ಧಿ ಕಾಮಗಾರಿಗಳ ನಡೆಯಬೇಕಿದೆ. ಹಾಗಾಗಿ ನಿಮ್ಮೆಲ್ಲರ ಸಹಕಾರವನ್ನು ಅಪೇಕ್ಷಿಸುತ್ತೇವೆ ಎಂದರು.

ಸಭೆಯಲ್ಲಿ ಹಿ ಸಾರ್ವಜನಿಕರು ಒಮ್ಮತದಿಂದ ರಸ್ತೆ ಅಗಲೀಕರಣ ಕಾಮಗಾರಿಗೆ ಒಪ್ಪಿಗೆ ಸೂಚಿಸಿದರು. ಕಾಮಗಾರಿ ಶೀಘ್ರವೇ ಪ್ರಾರಂಭವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ. ಸಭೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು,ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು‌


Spread the love