Home Mangalorean News Kannada News ಉಳ್ಳಾಲ ಈಜುಕೊಳ ದುರಂತ: ಬೀಚ್ ರೆಸಾಟ್೯ ಗೆ ಬೀಗಮುದ್ರೆ

ಉಳ್ಳಾಲ ಈಜುಕೊಳ ದುರಂತ: ಬೀಚ್ ರೆಸಾಟ್೯ ಗೆ ಬೀಗಮುದ್ರೆ

Spread the love

ಉಳ್ಳಾಲ ಈಜುಕೊಳ ದುರಂತ: ಬೀಚ್ ರೆಸಾಟ್೯ ಗೆ ಬೀಗಮುದ್ರೆ

ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸೋಮೇಶ್ವರದ VAZCO ಬೀಚ್ ರೆಸಾಟ್೯ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.

ಈ ರೆಸಾಟ್೯ನ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ನ ಸ್ವಿಮ್ಮಿಂಗ್ ಫುಲ್ನಲ್ಲಿ ಈಜಾಡುವಾಗ ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಏಕಾಏಕಿ ಮುಳುಗಿ ಮೃತಪಟ್ಟಿದ್ದರು.

ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಇವತ್ತು ಹತ್ತು ಗಂಟೆಗೆ ಮೂವರು ಈಜುಕೊಳಕ್ಕೆ ಇಳಿದಿದ್ದಾರೆ. ಈಜು ಬಾರದ ಯುವತಿ ಆಳ ಇದ್ದ ಕಡೆ ಹೋಗಿ ಸಿಲುಕಿಕೊಂಡಿದ್ದಳು. ಅವರಳ ರಕ್ಷಣೆಗೆ ಇನ್ನಿಬ್ಬರು ಆಳ ಇರುವ ಕಡೆ ತೆರಳಿದ್ದರು. ಮೂವರಿಗೆ ಈಜು ಬರುತ್ತಿರಲಿಲ್ಲ, ಹೀಗಾಗಿ ಸಾವು ಸಂಭವಿಸಿದೆ. ಮೂವರು ಮೈಸೂರು ಮೂಲದವರು, ಇಂಜಿನಿಯರಿಂಗ್ ಪೈನಲ್ ಇಯರ್ ಸ್ಟೂಡೆಂಟ್. ರೆಸಾರ್ಟ್ನಲ್ಲಿ ಲೈಫ್ ಗಾರ್ಡ್ ಯಾರು ಇರಲಿಲ್ಲ. ಆಳದ ಬಗ್ಗೆಯೂ ಮಾಹಿತಿ ಫಲಕ ಅಳವಡಿಸಿಲ್ಲ. ಈ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಮೈಸೂರು ಮೂಲದ ಮೂವರು ಯುವತಿಯರು ನಿನ್ನೆ ಬಂದಿದ್ದಾರೆ. ಇಂದು ಬೆಳಗ್ಗೆ 10ಗಂಟೆಗೆ ಸ್ವೀಮಿಂಗ್ನಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ಸ್ವೀಮಿಂಗ್ ಮಾಡುವಾಗ ಈ ದುರ್ಘಟನೆ ನಡೆದಿದೆ. ರೆಸಾರ್ಟ್ನಲ್ಲಿ ಕೆಲ ಸುರಕ್ಷಿತ ನಿಯಮಗಳನ್ನ ಪಾಲನೆ ಮಾಡಬೇಕು. ಕೆಲ ಪ್ರಾಥಮಿಕ ಮಾಹಿತಿ ಪ್ರಕಾರ ನಿಯಮ ಪಾಲನೆಯಾಗಿಲ್ಲ. ಸದ್ಯ ಕುಟುಂಬದವರಿಗೆ ಮಾಹಿತಿ ನೀಡಿದ್ದೇವೆ ಅವರು ಬರುತ್ತಿದ್ದಾರೆ. ರೆಸಾರ್ಟ್ನ ನ್ಯೂನತೆಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದರು.


Spread the love

Exit mobile version