Home Mangalorean News Kannada News ಉಳ್ಳಾಲ: ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

ಉಳ್ಳಾಲ: ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

Spread the love
RedditLinkedinYoutubeEmailFacebook MessengerTelegramWhatsapp

ಉಳ್ಳಾಲ: ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

ಉಳ್ಳಾಲ: ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಸೋಮೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ಕೀರ್ತನಾ ಎನ್ (21), ನಿಶಿತಾ ಎಂ.ಡಿ. (21) ಹಾಗೂ ಪಾರ್ವತಿ ಎಸ್‌. (20) ಎಂದು ಗುರುತಿಸಲಾಗಿದೆ. ಈ ಮೂವರು ಮೈಸೂರು ನಿವಾಸಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್‌ ಎಂಬಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ.

ಮೈಸೂರಿನ ಈ ಮೂವರು ಯುವತಿಯರು ಶನಿವಾರ ರೆಸಾರ್ಟ್ ಗೆ ಆಗಮಿಸಿದ್ದರು. ಇಂದು ಬೆಳಗ್ಗೆ ರೆಸಾರ್ಟ್ ಮುಂಭಾಗದಲ್ಲಿರುವ ಸ್ವಿಮ್ಮಿಂಗ್ ಪೂಲ್ ನಲ್ಲಿ ಆಟವಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿದ್ದು, ತನಿಖೆ ನಡೆಯುತ್ತಿದೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version