ಎಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Spread the love

ಎಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ನಗರದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬೆಂಗಳೂರು ಕೋರಮಂಗಲ ನಿವಾಇಸ ಮೂರನೇ ಸೆಮಿಸ್ಟರ್ ಎಲೆಕ್ಟ್ರಾನಿಕ್ ಮತ್ತು ಕಮ್ಯನಿ ಕೇಶನ್ ವಿಭಾಗದ ವಿದ್ಯಾರ್ಥಿ ಶರತ್ ಬಾಬು ಎಂದು ಗುರುತಿಸಲಾಗಿದೆ

ವಿದ್ಯಾರ್ಥಿಯು ಶನಿವಾರ ರಾತ್ರಿ ತನ್ನ ಕಾಲೇಜಿನ ಪಿಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ವಿದ್ಯಾರ್ಥಿಯ ಮನೆಯವರಿಗೆ ವಿಷಯ ತಲುಪಿಸಿದ್ದು ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸ್ಥಳೀಯ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love