ಎಂಡೋ ಸಲ್ಫಾನ್ ಸಂತ್ರಸ್ತರ ಸಮಸ್ಯೆ ಸ್ಥಳೀಯವಾಗಿ ಪರಿಹರಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ 

Spread the love

ಎಂಡೋ ಸಲ್ಫಾನ್ ಸಂತ್ರಸ್ತರ ಸಮಸ್ಯೆ ಸ್ಥಳೀಯವಾಗಿ ಪರಿಹರಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ 

ಮಂಗಳೂರು: ಎಂಡೋಸಲ್ಫಾನ್ ಸಂತ್ರಸ್ತರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಯಾ ಆರೋಗ್ಯ ಕೇಂದ್ರ ಮಟ್ಟದಲ್ಲಿ ಎಂಡೋ ಸಂತ್ರಸ್ತರು, ಅವರ ಪೆÇೀಷಕರು, ವೈದ್ಯಾಧಿಕಾರಿಗಳು, ಪಿಡಿಓ, ವಿ.ಎ. ಅವರನ್ನೊಳಗೊಂಡ ತಂಡ ರಚಿಸಬೇಕು. ಎಂಡೋಸಲ್ಫಾನ್ ಬಾಧಿತ ಮಕ್ಕಳು ಮಾನಸಿಕ ಅಂಗವೈಕಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ನರಳುತ್ತಾರೆ. ಅವರನ್ನು ಗುರುತಿಸಿ, ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆ ಅಧಿಕಾರಿಗಳು ಗ್ರಾಮವಾರು ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯನ್ನು ತಯಾರಿಸಿ ಅವರಿಗೆ ಅಗತ್ಯವಿರುವ ಔಷಧಗಳು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ತಪ್ಪದೇ ನೀಡಬೇಕು . ಅವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಎಂಡೋಸಲ್ಫಾನ್ ಪೀಡಿತರ ಮಾಹಿತಿ ಪಟ್ಟಿ ನೋಂದಣಿಯಾಗಿರುತ್ತದೆ. ಆರೋಗ್ಯ ಕೇಂದ್ರಗಳ ಮೂಲಕ ಔಷಧಗಳ ವಿತರಣೆಯನ್ನು ಸಂತ್ರಸ್ತರ ಮನೆ ಮನೆಗೆ ತಲುಪಿಸಲು ಕ್ರಮವಹಿಸುವಂತೆ ಸಂಬಂಧಪಟ್ಟವರಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ 364 ಎಂಡೋಸಲ್ಫಾನ್ ಪೀಡಿತರು ಸಾವನ್ನಪ್ಪಿದ್ದು, 6314 ಮಂದಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಎಂಡೋಸಲ್ಫಾನ್ ಕೋಶ ನೋಡಲ್ ಅಧಿಕಾರಿ ಡಾ. ನವೀನ್‍ಚಂದ್ರ ಕುಲಾಲ್ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋμï ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಆರೋಗ್ಯ ಇಲಾಖೆ ಎಂಡೋಸಲ್ಫಾನ್ ವಿಭಾಗದ ಸಮನ್ವಯಾಧಿಕಾರಿ ಸಜೀವುದ್ದೀನ್, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.


Spread the love