ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

Spread the love

ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಪುತ್ತೂರು: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ, ನಡೆದ ಸುಮಾರು ₹1,48,000 ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ ₹ 30,000/- ಸೇರಿ ಒಟ್ಟು ₹1,78,000/- ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಲಾಗಿ, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಕಳವು ಮಾಡಿದ ಸೊತ್ತು ಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಂಡಿದ್ದಾರೆ.

ಸದ್ರಿ ಪ್ರಕರಣದ ಪತ್ತೆಗಾಗಿ ಕಾರ್ಯದಲ್ಲಿ, ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್,ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಎಂ KSPS ಮತ್ತು ರಾಜೇಂದ್ರ KSPS ರವರುಗಳ ಮಾರ್ಗದರ್ಶನದಲ್ಲಿ, ವಿಜಯ ಪ್ರಸಾದ್, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ ರವರ ಮತ್ತು ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಸಂತೋಷ್ ಬಿ ಪಿ ಪೊಲೀಸ್ ಉಪನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆವರು ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂಧಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿರುತ್ತಾರೆ. ಸದ್ರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮತ್ತು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಯನ್ನು ವ್ಯಕ್ತವಾಗಿರುತ್ತದೆ.


Spread the love
Subscribe
Notify of

0 Comments
Inline Feedbacks
View all comments