Home Mangalorean News Kannada News ಎಸಿ ಕಾರು ಬಿಟ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಪ್ರಯಾಣಿಸಿದ ಸಚಿವ ಪ್ರಮೋದ್ ಮಧ್ವರಾಜ್

ಎಸಿ ಕಾರು ಬಿಟ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಪ್ರಯಾಣಿಸಿದ ಸಚಿವ ಪ್ರಮೋದ್ ಮಧ್ವರಾಜ್

Spread the love

ಎಸಿ ಕಾರು ಬಿಟ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಪ್ರಯಾಣಿಸಿದ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ: ಸದಾ ಎಸಿ ಕಾರಿನಲ್ಲೇ ತಿರುಗುತ್ತಿರುವ ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಮೋದ್ ಮಧ್ವರಾಜ್ ಅವರು ಶುಕ್ರವಾರ ತಮ್ಮ ಕಾರನ್ನು ಬಿಟ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಪ್ರಯಾಣಿಸಿ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ಸಚಿವ ಪ್ರಮೋದ್ ಮಧ್ವರಾಜ್ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯ ಬ್ರಹ್ಮಾವರ ವಿಭಾಗದಲ್ಲಿ ಹಲವಾರು ಅಭಿವೃದ್ಧಿಪರ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ಇನ್ನಿತರ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿತ್ತು. ಬೆಳಿಗ್ಗೆ ಯುವಜನ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅಜ್ಜರಕಾಡಿನಲ್ಲಿ ಆಯೋಜಿಸಿದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಬಳಿಕ ತಮ್ಮ ದಿನನಿತ್ಯದ ಕಾರನ್ನು ಬಿಟ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ತಮ್ಮ ಕಾರ್ಯಕರ್ತರೊಡನೆ ಬ್ರಹ್ಮಾವರದತ್ತ ಪ್ರಯಾಣ ಬೆಳಿಸಿದರು.

ಸಚಿವರು ಸಂಜೆಯ ತನಕ ಬ್ರಹ್ಮಾವರದಲ್ಲಿ ಹಲವಾರು ಅಭಿವೃದ್ಧಿಪರ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ಇನ್ನಿತರ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿದ್ದು, ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿಯೇ ಪ್ರಯಾಣಿಸಲಿದ್ದಾರೆ.

 


Spread the love
2 Comments
Inline Feedbacks
View all comments
suresh
7 years ago

That page only for congress party page

Truth Seeker
7 years ago

Getting ready for state level elections? smiles…

wpDiscuz
Exit mobile version