Home Mangalorean News Kannada News ಎಸ್.ಎಸ್.ಎಲ್.ಸಿ. ಫಲಿತಾಂಶ: ಇನ್ನೂ ದಿನಾಂಕ ನಿಶ್ಚಯವಾಗಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

ಎಸ್.ಎಸ್.ಎಲ್.ಸಿ. ಫಲಿತಾಂಶ: ಇನ್ನೂ ದಿನಾಂಕ ನಿಶ್ಚಯವಾಗಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

Spread the love

ಎಸ್.ಎಸ್.ಎಲ್.ಸಿ. ಫಲಿತಾಂಶ: ಇನ್ನೂ ದಿನಾಂಕ ನಿಶ್ಚಯವಾಗಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ನಾಳೆ ಅಂದರೆ ಆಗಸ್ಟ್ 6ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, ಫಲಿತಾಂಶದ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಕಳೆದ ತಿಂಗಳು ರಾಜ್ಯ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಎಸ್ಎಸ್ಎಲ್ಸಿ ಫಲಿತಾಂಶನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದ್ದರು.

ಎಸ್ಎಸ್ಎಲ್ಸಿ ಫಲಿತಾಂಶವನ್ನು ಆಗಸ್ಟ್ 7 ರೊಳಗೆ ಘೋಷಿಸುವ ಸಾಧ್ಯತೆ ಇದೆ. ಕೊರೋನಾ ಸೋಂಕು ಭೀತಿಯ ನಡುವೆಯೂ ಸರ್ಕಾರವು ಯಶಸ್ವಿಯಾಗಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಿತ್ತು. ಜೂನ್ 25 ರಂದು 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇಕಡಾ 98 ರಷ್ಟು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಮಾಸ್ಕ್ ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


Spread the love

Exit mobile version