ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆಗೆ ರಾಷ್ಟ್ರ ಪ್ರಶಸ್ತಿ
ಮಂಗಳೂರು: ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆ ಗೆ ವಿಕಲ ಚೇತನರ ಅಭ್ಯುದಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಭಾರತ ಸರಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮಂತ್ರಾಲಯದ ವಿಕಲಚೇತನರ ಸಬಲೀಕರಣ ಇಲಾಖೆಯು ಕೊಡಮಾಡುವ “ಸಮನ್ವಯ ಶಿಕ್ಷಣದ ಮೂಲಕ ವಿಕಲಚೇತನರ ಸಬಲೀಕರಣಕ್ಕೆ ಶ್ರಮಿಸಿದ ಅತ್ಯುತ್ತಮ ಸಂಸ್ಥೆ “ಎನ್ನುವ ರಾಷ್ಟ್ರ ಪ್ರಶಸ್ತಿಯನ್ನು ದೆಹಲಿಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆಯ ಸಮಾರಂಭದಲ್ಲಿ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರ ಮುಖೇನ ಕೊಡಮಾಡಲಾಯಿತು.
ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರೋ ಎ ರಾಜೇಂದ್ರ ಶೆಟ್ಟಿಯವರು ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು. ವೇದಿಕೆಯಲ್ಲಿ ಕೇದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮಂತ್ರಾಲಯದ ಸಚಿವರಾದ ತಾವರ್ ಚಂದ್ ಗಹ್ಲೋಟ್ ಹಾಗೂ ಇತರ ಕೇಂದ್ರ ಸರಕಾರದ ರಾಜ್ಯ ಸಚಿವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು