Spread the love
ಎ. 25 (ನಾಳೆ) ಉಡುಪಿ ಧರ್ಮಪ್ರಾಂತ್ಯ ವತಿಯಿಂದ ಪೋಪ್ ಫ್ರಾನ್ಸಿಸ್ ಅವರಿಗೆ ಶೃದ್ಧಾಂಜಲಿ ಸಭೆ
ಉಡುಪಿ: ಎಪ್ರಿಲ್ 21 ರಂದು ನಿಧನರಾದ ಕಥೊಲಿಕ ಕ್ರೈಸ್ತ ಸಮುದಾಯದ ಪರಮಪವಿತ್ರ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಸ್ಮರಣಾರ್ಥವಾಗಿ ಎಪ್ರಿಲ್ 25 ರಂದು 5 ಗಂಟೆಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಅಖಿಲ ಕರ್ನಾಟಕ ಮಾನವ ಹಕ್ಕುಗಳ ಕೈಸ್ತ ಐಕ್ಯತಾ ಒಕ್ಕೂಟ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಸರ್ವ ಧರ್ಮ ಶೃದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಎಪ್ರಿಲ್ 25 ರಂದು ಶುಕ್ರವಾರ ಸಂಜೆ 5 ಗಂಟೆಗೆ ಉಡುಪಿ ಶೋಕಮಾತಾ ದೇವಾಲಯದಲ್ಲಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ನೇತೃತ್ವದಲ್ಲಿ ಬಲಿಪೂಜೆ ನಡೆಯಲಿದ್ದು, ಬಳಿಕ 6.00 ಗಂಟೆಗೆ ಚರ್ಚಿನ ಆವೆ ಮರಿಯಾ ಸಭಾಂಗಣದಲ್ಲಿ ಸರ್ವ ಧರ್ಮದ ನಾಯಕರುಗಳ ಉಪಸ್ಥಿತಿಯಲ್ಲಿ ಶೋಕ ಸಭೆ ನಡೆಯಲಿದೆ ಎಂದು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the love