Home Mangalorean News Kannada News ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಆಕಾಶದಲ್ಲಿ ಗಿರಕಿ ಹೊಡೆದ ನಂತರ ಸುರಕ್ಷಿತವಾಗಿ ಎಮರ್ಜೆನ್ಸಿ ಲ್ಯಾಂಡಿಂಗ್

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಆಕಾಶದಲ್ಲಿ ಗಿರಕಿ ಹೊಡೆದ ನಂತರ ಸುರಕ್ಷಿತವಾಗಿ ಎಮರ್ಜೆನ್ಸಿ ಲ್ಯಾಂಡಿಂಗ್

Spread the love

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಆಕಾಶದಲ್ಲಿ ಗಿರಕಿ ಹೊಡೆದ ನಂತರ ಸುರಕ್ಷಿತವಾಗಿ ಎಮರ್ಜೆನ್ಸಿ ಲ್ಯಾಂಡಿಂಗ್

ಚೆನ್ನೈ : ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ  ವಿಮಾನದಲ್ಲಿ ದಿಢೀರ್ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡುವ ಮುನ್ನ ಸುಮಾರು ಎರಡು ಗಂಟೆಗಳ ಕಾಲ ತಮಿಳುನಾಡಿನ ತಿರುಚ್ಚಿ ನಗರದ ಮೇಲೆ ಈ ವಿಮಾನ ಗಿರಕಿಹೊಡೆದಿದ್ದು, ಜನರಲ್ಲಿ ಆತಂಕ ಮೂಡಿಸಿತ್ತು. ತಿರುಚಿರಾಪಳ್ಳಿಯಿಂದ  ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು.

IX613 ವಿಮಾನ 141 ಪ್ರಯಾಣಿಕರೊಂದಿಗೆ ಸಂಜೆ 5:45 ಕ್ಕೆ ತಿರುಚ್ಚಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿತ್ತು. ತಾಂತ್ರಿಕ ದೋಷ ಕಂಡು ಬಂದ ಕೂಡಲೇ ಎಮರ್ಜೆನ್ಸಿ ಘೋಷಿಸಿದ ಏರ್ ಇಂಡಿಯಾ ವಿಮಾನದ ಪೈಲಟ್ 3 ಗಂಟೆಗಳ ಕಾಲ ಆಗಸದಲ್ಲೇ ಗಿರಕಿ ಹೊಡೆದು ನಂತರ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸೇಫ್ ಲ್ಯಾಂಡಿಂಗ್ ಮಾಡಿದ್ದಾರೆ.

ತಿರುಚ್ಚಿ ವಿಮಾನ ನಿಲ್ದಾಣದ ನಿರ್ದೇಶಕ ಗೋಪಾಲಕೃಷ್ಣನ್ ಮಾತನಾಡಿ, ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷವನ್ನು (ಹೈಡ್ರಾಲಿಕ್ ವೈಫಲ್ಯ) ಎದುರಿಸಿದೆ. ಹಾಗಾಗಿ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲು ಇಂಧನವನ್ನು ಕಡಿಮೆ ಮಾಡಲು ಗಿರಕಿ ಹೊಡೆದಿತ್ತು ಎಂದು ಹೇಳಿದ್ದಾರೆ. ವಿಮಾನ ಲ್ಯಾಂಡಿಂಗ್ ವೇಳೆ ಯಾವುದೇ ದೊಡ್ಡ ಅಪಘಾತ ಸಂಭವಿಸದಂತೆ ಖಚಿತಪಡಿಸಿಕೊಳ್ಳಲು 20 ಕ್ಕೂ ಹೆಚ್ಚು ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳನ್ನು ವಿಮಾನ ನಿಲ್ದಾಣದಲ್ಲಿ ಇರಿಸಲಾಗಿತ್ತು.

“ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ IX 613 ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಡಿಜಿಸಿಎ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಲ್ಯಾಂಡಿಂಗ್ ಗೇರ್ ತೆರೆಯುತ್ತಿದೆ. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ವಿಮಾನ ನಿಲ್ದಾಣವನ್ನು ಅಲರ್ಟ್ ಮೋಡ್‌ನಲ್ಲಿ ಇರಿಸಲಾಗಿದೆ” ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂಬ ಸುದ್ದಿ ಕೇಳಿ ನನಗೆ ತುಂಬ ಖುಷಿಯಾಗಿದೆ. ಲ್ಯಾಂಡಿಂಗ್ ಗೇರ್ ಸಮಸ್ಯೆಯ ಸುದ್ದಿಯನ್ನು ಸ್ವೀಕರಿಸಿದ ತಕ್ಷಣ, ನಾನು ತಕ್ಷಣ ಫೋನ್‌ನಲ್ಲಿ ಅಧಿಕಾರಿಗಳೊಂದಿಗೆ ತುರ್ತು ಸಭೆಯನ್ನು ಸಂಯೋಜಿಸಿದೆ ಮತ್ತು ಅಗ್ನಿಶಾಮಕ ಇಂಜಿನ್‌ಗಳನ್ನು ನಿಯೋಜಿಸುವುದು, ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯಕೀಯ ನೆರವು ಸೇರಿದಂತೆ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಲು ಅವರಿಗೆ ಸೂಚಿಸಿದೆ. ಎಲ್ಲಾ ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಮತ್ತು ಹೆಚ್ಚಿನ ಸಹಾಯವನ್ನು ಒದಗಿಸಲು ನಾನು ಈಗ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಸುರಕ್ಷಿತ ಲ್ಯಾಂಡಿಂಗ್‌ಗಾಗಿ ಕ್ಯಾಪ್ಟನ್ ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.


Spread the love

Exit mobile version