ಐಎಂಎ ಕಂಪನಿ ಮಾಲೀಕ ಮನ್ಸೂರ್ ಖಾನ್ ಎಸ್ಐಟಿ ವಶಕ್ಕೆ
ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಕಂಪನಿ ಮಾಲೀಕ ಮನ್ಸೂರ್ ಖಾನ್ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ದುಬೈನಲ್ಲಿ ತಲೆಮರೆಸಿಕೊಂಡಿದ್ದ ಮನ್ಸೂರ್ ಖಾನ್ ಭಾರತಕ್ಕೆ ಆಗಮಿಸುತ್ತಿರುವ ಖಚಿತ ಮಾಹಿತಿನ್ನು ಆಧರಿಸಿ ಎಸ್ಐಟಿ ಅಧಿಕಾರಿಗಳು ಗುರುವಾರ ಮಧ್ಯರಾತ್ರಿ 1.50 ಕ್ಕೆ ಮನ್ಸೂರ್ನನ್ನು ವಶಕ್ಕೆ ಪಡೆದಿದ್ದಾರೆ.
ಐಎಂಎ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು. ಜಾರಿ ನಿರ್ದೇಶನಾಲಯ ಸಹ ದೂರು ದಾಖಲಿಸಿಕೊಂಡು ಈ ಪ್ರಕರಣದ ತನಿಖೆ ನಡೆಸುತ್ತಿತ್ತು. ಇದುವರೆಗೂ ಮನ್ಸೂರ್ ಖಾನ್ ಮತ್ತು ಐಎಂಎ ವಿರುದ್ದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ 40 ಸಾವಿರಕ್ಕೂ ಹೆಚ್ಚು ವಂಚನೆ ದೂರು ದಾಖಲಾಗಿದೆ.