ಐವನ್ ಡಿಸೋಜರ ಮನೆಗೆ ಕಲ್ಲು ತೂರಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Spread the love

ಐವನ್ ಡಿಸೋಜರ ಮನೆಗೆ ಕಲ್ಲು ತೂರಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
 

ಮಂಗಳೂರು : ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ವೆಲೆನ್ಸಿಯಾದಲ್ಲಿರುವ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಬೋಳಂತೂರು ನಾರಾಯಣ ಕೋಡಿಯ ಭರತ್ ಯಾನೆ ಯಕ್ಷಿತ್ (24) ಮತ್ತು ಕೊಳ್ನಾಡು ಗ್ರಾಮದ ಪರ್ತಿಪ್ಪಾಡಿಯ ದಿನೇಶ್ ಕುಡ್ತಮುಗೇರು (20) ಬಂಧಿತ ಆರೋಪಿಗಳು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್‌ ಅಗರ್ವಾಲ್‌ ಮಾಹಿತಿ ನೀಡಿದ್ದಾರೆ.

 ದಿನೇಶ್ ಚಾಲಕನಾಗಿ ಕೆಲಸ ಮಾಡುತ್ತಿದ್ದು ಈ ಹಿಂದೆ ಮೂರು ಹಲ್ಲೆ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಭರತ್ ಕನ್ಯಾನದಲ್ಲಿ ಫೈನಾನ್ಸ್ ಕಲೆಕ್ಷನ್ ಮಾಡುವ ಕೆಲಸ ಮಾಡುತ್ತಿದ್ದು ಈ ಹಿಂದೆ ಒಂದು ಪ್ರಕರಣ ಇದೆ. ಆರೋಪಿಗಳು ಮಂಗಳೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ, ಐವಾನ್ ವಿರುದ್ಧದ ಸಿಟ್ಟಿನಲ್ಲಿ ಕಲ್ಲು ಎಸೆದಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.

ಐವನ್ ಮನೆಯ ಪರಿಸರದ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾಗಿ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ರಾಜ್ಯಪಾಲರನ್ನು ಬಾಂಗ್ಲಾಕ್ಕೆ ಹೋಲಿಸಿ ಹೇಳಿಕೆ ನೀಡಿದ್ದಕ್ಕಾಗಿ ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು. ಇದರ ನಡುವೆ, ಆಗಸ್ಟ್ 20 ರ ತಡರಾತ್ರಿ ಐವನ್ ಡಿಸೋಜಾ ಅವರ ಮಂಗಳೂರು ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಕಲ್ಲು ತೂರಾಟ ನಡೆದಿತ್ತು. ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಮನೆಯ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದರು ಎನ್ನಲಾಗಿತ್ತು. ಘಟನೆ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪಾಂಡೇಶ್ವರ ಠಾಣೆ ಪೊಲೀಸರು ಇದೀಗ ಇಬ್ಬರನ್ನು ಬಂಧಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments